ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2022 ರ ಅಕ್ಟೋಬರ್ 31 ರ ವರೆಗೆ ವಿಸ್ತರಣೆ

Posted On: 07 OCT 2022 2:21PM by PIB Bengaluru

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ 2022 ರ ಸೆಪ್ಟೆಂಬರ್ 30 ರಿಂದ 2022 ರ ಅಕ್ಟೋಬರ್ 31 ರ ಸಂಜೆ 5 ಗಂಟೆವೆರೆಗೆ ವಿಸ್ತರಿಸಿದೆ. ಈ ಕುರಿತು ಜನ ಸಾಮಾನ್ಯರಿಗೆ ಮಾಹಿತಿ ನೀಡಿದ್ದು, ರಾಷ್ಟ್ರೀಯ ಪ್ರಶಸ್ತಿಗಳ ಪೋರ್ಟಲ್ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ http://(https://awards.gov.in/).

2023 ರ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕಾಗಿ ಅರ್ಜಿದಾರರು ರಾಷ್ಟ್ರೀಯ ಪ್ರಶಸ್ತಿಗಳ ಪೋರ್ಟಲ್ ನಲ್ಲಿ  (https://awards.gov.in/) ನೋಂದಣಿ ಮಾಡಿಕೊಳ್ಳುವ ಹಾಗೂ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಪಿ.ಎಂ.ಆರ್.ಪಿ.ಬಿ ಪೋರ್ಟಲ್ ನಲ್ಲಿ ಅಂದರೆ https://nca-wcd.nic.in/ ನಲ್ಲಿ ಅರ್ಜಿ ಸಲ್ಲಿಸಿದವರಿಗೂ ಇದು ಅನ್ವಯಿಸುತ್ತದೆ.

*****



(Release ID: 1865879) Visitor Counter : 116