ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಬಸ್ ದುರಂತಕ್ಕೆ ಪ್ರಧಾನಿ ಸಂತಾಪ
ಪಿಎಂಎನ್‌ಆರ್‌ಎಫ್‌ನಿಂದ ಪರಿಹಾರ ಘೋಷಣೆ
प्रविष्टि तिथि:
08 OCT 2022 9:43AM by PIB Bengaluru
ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಹಾರೈಸಿದ್ದಾರೆ.
ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ.
ಈ ಬಗ್ಗೆ ಪ್ರಧಾನ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ;
"ನಾಸಿಕ್‌ನಲ್ಲಿ ಸಂಭವಿಸಿದ ಬಸ್ ದುರಂತದಿಂದ ದುಃಖವಾಗಿದೆ. ಈ ದುರ್ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ: ಪ್ರಧಾನ ಮಂತ್ರಿ
"ನಾಸಿಕ್‌ನಲ್ಲಿ ಬಸ್‌ಗೆ ಬೆಂಕಿ ತಗುಲಿ ಸಾವನ್ನಪ್ಪಿದ ಪ್ರತಿಯೊಬ್ಬರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್ ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಾಳುಗಳಿಗೆ 50,000 ರೂ.ಗಳನ್ನು ನೀಡಲಾಗುವುದು: PM @narendramodi" ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.
*******
(रिलीज़ आईडी: 1866112)
आगंतुक पटल : 166
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam