ಗೃಹ ವ್ಯವಹಾರಗಳ ಸಚಿವಾಲಯ

ಸಮಾಜವಾದಿ ಪಕ್ಷದ ಹಿರಿಯ ನಾಯಕ ಶ್ರೀ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಸಂತಾಪ


ಶ್ರೀ ಅಮಿತ್ ಶಾ ಅವರು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ನೇತಾಜಿಯವರಿಗೆ ಅಂತಿಮ ನಮನ ಸಲ್ಲಿಸಿದರು ಮತ್ತು ಅವರ ಪುತ್ರ ಶ್ರೀ ಅಖಿಲೇಶ್ ಯಾದವ್ ಮತ್ತು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಶ್ರೀ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದಾಗಿ ಉತ್ತರ ಪ್ರದೇಶ ಮತ್ತು ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ನಿರ್ವಾತ ಸೃಷ್ಟಿಯಾಗಿದೆ.

ಶ್ರೀ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ ವಿಶಿಷ್ಟ ರಾಜಕೀಯ ಕೌಶಲ್ಯದಿಂದ ದಶಕಗಳ ಕಾಲ ರಾಜಕೀಯದಲ್ಲಿ ಸಕ್ರಿಯರಾಗಿದ್ದರು

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮರುಸ್ಥಾಪನೆಗಾಗಿ ಧ್ವನಿ ಎತ್ತಿದ್ದರು. ಜನಸಾಮಾನ್ಯರ ತಳಮಟ್ಟದ ನಾಯಕರಾಗಿ ಅವರು ಸದಾ ನೆನಪಿನಲ್ಲಿ ಉಳಿಯುತ್ತಾರೆ. ಅವರ ನಿಧನವು ಭಾರತೀಯ ರಾಜಕೀಯದಲ್ಲಿ ಒಂದು ಯುಗಾಂತ್ಯವಾಗಿದೆ.

Posted On: 10 OCT 2022 4:01PM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸಮಾಜವಾದಿ ಪಕ್ಷದ ಹಿರಿಯ ನಾಯಕ ಶ್ರೀ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಅಮಿತ್ ಶಾ ಅವರು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ನೇತಾಜಿಯವರಿಗೆ ಅಂತಿಮ ನಮನ ಸಲ್ಲಿಸಿದರು ಮತ್ತು ಅವರ ಪುತ್ರ ಅಖಿಲೇಶ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

 Image

ಈ ಕುರಿತು ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಸರಣಿ ಟ್ವೀಟ್‌ ಮಾಡಿ, ಶ್ರೀ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದಾಗಿ ಉತ್ತರ ಪ್ರದೇಶ ಮತ್ತು ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ನಿರ್ವಾತ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.

 Image

ಶ್ರೀ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ ವಿಶಿಷ್ಟ ರಾಜಕೀಯ ಕೌಶಲ್ಯದಿಂದ ದಶಕಗಳ ಕಾಲ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮರುಸ್ಥಾಪನೆಗಾಗಿ ಧ್ವನಿ ಎತ್ತಿದ್ದರು. ಜನಸಾಮಾನ್ಯರ ತಳಮಟ್ಟದ ನಾಯಕರಾಗಿ ಅವರು ಸದಾ ನೆನಪಿನಲ್ಲಿ ಉಳಿಯುತ್ತಾರೆ. ಅವರ ನಿಧನವು ಭಾರತೀಯ ರಾಜಕೀಯದಲ್ಲಿ ಒಂದು ಯುಗಾಂತ್ಯವಾಗಿದೆ.
 Image

ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.. ಅಗಲಿದ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ. ಓಂ ಶಾಂತಿ ಶಾಂತಿ ಶಾಂತಿ ಎಂದು ಶ್ರೀ ಅಮಿತ್ ಶಾ ಹೇಳಿದ್ದಾರೆ.                        

Image

******



(Release ID: 1866530) Visitor Counter : 169