ಕಾನೂನು ಮತ್ತು ನ್ಯಾಯ ಸಚಿವಾಲಯ
azadi ka amrit mahotsav

ಗುಜರಾತ್ ನಲ್ಲಿ ನಾಳೆಯಿಂದ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮ್ಮೇಳನ ಪ್ರಾರಂಭ


ಪ್ರಧಾನ ಭಾಷಣ ಮಾಡಲಿರುವ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಶ್ರೀ ಕಿರಣ್ ರಿಜಿಜು

ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಅತ್ಯುತ್ತಮ ರೂಢಿಗಳು ಮತ್ತು ಕಲ್ಪನೆಗಳನ್ನು ವಿನಿಮಯ ಮಾಡಿಕೊಳ್ಳಲು ವೇದಿಕೆ ಕಲ್ಪಿಸಲಿರುವ ಕಾರ್ಯಕ್ರಮ

Posted On: 13 OCT 2022 2:53PM by PIB Bengaluru

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು ಕಾನೂನು ಸಚಿವರುಗಳು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮಾವೇಶವನ್ನು 2022 ರ ಅಕ್ಟೋಬರ್ 14 ರಿಂದ 16 ರವರೆಗೆ ಗುಜರಾತ್ ನ ಏಕ್ತಾ ನಗರದಲ್ಲಿ ಆಯೋಜಿಸುತ್ತಿದ್ದು, ಇದರಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಶ್ರೀ ಕಿರಣ್ ರಿಜಿಜು ಅವರು ಅಕ್ಟೋಬರ್ 15ರಂದು ಪ್ರಧಾನ ಭಾಷಣ ಮಾಡಲಿದ್ದಾರೆ.

ಕಾನೂನು ಮತ್ತು ನ್ಯಾಯ ಸಚಿವಾಲಯದ ಈ ಉಪಕ್ರಮವು ಭಾರತದ ಕಾನೂನು ವ್ಯವಸ್ಥೆಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚೆಗೆ ವೇದಿಕೆಯನ್ನು ಒದಗಿಸುತ್ತದೆ, ಇದರಿಂದ ನೀತಿ ನಿರೂಪಕರು ದೇಶದ ಭವಿಷ್ಯಕ್ಕಾಗಿ ಮಾರ್ಗಸೂಚಿಯನ್ನು ಅಭಿವೃದ್ಧಿ ಪಡಿಸಬಹುದಾಗಿರುತ್ತದೆ. ಈ ಕಾರ್ಯಕ್ರಮವು ಕಲ್ಪನೆಗಳ ವಿನಿಮಯಕ್ಕೆ ಒಂದು ವೇದಿಕೆಯನ್ನು ಒದಗಿಸುತ್ತದೆ ಮತ್ತು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಅತ್ಯುತ್ತಮ ರೂಢಿಗಳನ್ನು ಹಂಚಿಕೊಳ್ಳಲು ಒಂದು ಅವಕಾಶವನ್ನು ಒದಗಿಸುತ್ತದೆ, ಅದು ದೇಶದ ಒಟ್ಟಾರೆ ಕಾನೂನು ವ್ಯವಸ್ಥೆಯನ್ನು ಅದರ ನಾಗರಿಕರ ಹಿತದೃಷ್ಟಿಯಿಂದ ವಿಶೇಷವಾಗಿ ಸಮಾಜದ ದುರ್ಬಲ ವರ್ಗಗಳ ಹಿತದೃಷ್ಟಿಯಿಂದ ಮೇಲ್ದರ್ಜೆಗೇರಿಸಲು ಸಹಾಯ ಮಾಡುತ್ತದೆ, ಆ ಮೂಲಕ ಅವರನ್ನು "ಸಮಗ್ರ ಮತ್ತು ಸ್ಪಂದನಶೀಲ ನವ ಭಾರತ" ನಿರ್ಮಿಸಲು ಅವರನ್ನು ಸಬಲೀಕರಿಸುತ್ತದೆ.

******



(Release ID: 1867575) Visitor Counter : 181