ಪ್ರಧಾನ ಮಂತ್ರಿಯವರ ಕಛೇರಿ

ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿಗಳು

Posted On: 15 OCT 2022 9:53AM by PIB Bengaluru

ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್‌ ಕಲಾಂ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸಿರುವ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜ್ಞಾನಿಯಾಗಿ ಹಾಗೂ ರಾಷ್ಟ್ರಪತಿಯಾಗಿ ಡಾ.ಎ.ಪಿ.ಜೆ. ಅಬ್ದುಲ್‌ ಕಲಾಂ ಅವರು ಸಮಾಜದ ಎಲ್ಲ ವರ್ಗದವರನ್ನು ಸೆಳೆದಿರುವ ಬಗ್ಗೆ ಸ್ಮರಿಸಿದ್ದಾರೆ.

ಈ ಸಂಬಂಧ ಶನಿವಾರ ಟ್ವೀಟ್‌ ಮಾಡಿರುವ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು,

"ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್‌ ಕಲಾಂ ಅವರಿಗೆ ಹುಟ್ಟುಹಬ್ಬದ ಗೌರವಪೂರ್ವಕ ನಮನಗಳು. ಅವರು ವಿಜ್ಞಾನಿಯಾಗಿ ಹಾಗೂ ರಾಷ್ಟ್ರಪತಿಯಾಗಿ ಎಲ್ಲ ವರ್ಗದ ಜನರನ್ನು ಸೆಳೆದು ಅವರೊಂದಿಗೆ ಅವಿನಾಭಾವ ಸಂಬಂಧ ಬೆಳೆಸಿಕೊಂಡಿದ್ದು ಶ್ಲಾಘನೀಯ,ʼʼ ಎಂದು ಗುಣಗಾನ ಮಾಡಿದ್ದಾರೆ.

 

******



(Release ID: 1868148) Visitor Counter : 125