ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾತೃಭಾಷೆಯಲ್ಲಿ ವೈದ್ಯಕೀಯ ಶಿಕ್ಷಣ ಆರಂಭಕ್ಕೆ ಪ್ರಧಾನಿ ಶ್ಲಾಘನೆ

प्रविष्टि तिथि: 16 OCT 2022 7:07PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೋಪಾಲ್ ನಲ್ಲಿ ಹಿಂದಿಯಲ್ಲಿ ವೈದ್ಯಕೀಯ ಶಿಕ್ಷಣ ಆರಂಭಿಸಿರುವುದನ್ನು ಶ್ಲಾಘಿಸಿದ್ದಾರೆ. ಈ ಐತಿಹಾಸಿಕ ಕ್ರಮವು ಲಕ್ಷಾಂತರ ವಿದ್ಯಾರ್ಥಿಗಳಿಗೆ ತಮ್ಮದೇ ಆದ ಭಾಷೆಯಲ್ಲಿ ವೈದ್ಯಕೀಯ ಅಧ್ಯಯನ ಮಾಡಲು ಮತ್ತು ದೇಶದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಸಶಕ್ತಗೊಳಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಜತೆಗೆ ಇದು ವಿದ್ಯಾರ್ಥಿಗಳಿಗೆ ಅವಕಾಶಗಳ ಅನೇಕ ಬಾಗಿಲುಗಳನ್ನು ತೆರೆಯುತ್ತದೆ ಎಂದು ಅವರು ಹೇಳಿದರು.

ಗೃಹ ಸಚಿವ ಶ್ರೀ ಅಮಿತ್ ಶಾ ಅವರ ಟ್ವೀಟ್ ಅನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ ಅವರು, ಈ ಕುರಿತು ಟ್ವೀಟ್ ಮಾಡಿದ್ದಾರೆ.

"ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿನ ಈ ಪ್ರಾರಂಭವು ದೇಶದಲ್ಲಿ ದೊಡ್ಡ ಸಕಾರಾತ್ಮಕ ಬದಲಾವಣೆಯನ್ನು ತರಲಿದೆ. ಇದರೊಂದಿಗೆ, ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭಾಷೆಯಲ್ಲಿ ಅಧ್ಯಯನ ಮಾಡಲು ಸಾಧ್ಯವಾಗುತ್ತದೆ, ಜತೆಗೆ ಅವರಿಗೆ ಅನೇಕ ಅವಕಾಶಗಳ ಬಾಗಿಲುಗಳು ಸಹ ತೆರೆಯುತ್ತವೆ. " ಎಂದು ಹೇಳಿದ್ದಾರೆ.


*****


(रिलीज़ आईडी: 1868507) आगंतुक पटल : 165
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam