ಪ್ರಧಾನ ಮಂತ್ರಿಯವರ ಕಛೇರಿ

ಅಕ್ಟೋಬರ್ 22 ರಂದು ಧನ್ತೇರಸ್ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ಪಿಎಂಎವೈ-ಜಿ ಅಡಿ ನಿರ್ಮಿಸಲಾದ 4.5 ಲಕ್ಷಕ್ಕೂ ಹೆಚ್ಚು ಮನೆಗಳ 'ಗೃಹ ಪ್ರವೇಶ'ದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ


ಯೋಜನೆಯಡಿ ಮಧ್ಯಪ್ರದೇಶದಲ್ಲಿ 35,000 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಸುಮಾರು 29 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗಿದೆ.

Posted On: 19 OCT 2022 5:53PM by PIB Bengaluru

ಅಕ್ಟೋಬರ್ 22 ರಂದು ಧನ್ತೇರಸ್ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಸತ್ನಾದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ - ಗ್ರಾಮೀಣ್‌ ಅಡಿ ನಿರ್ಮಿಸಲಾದ ಸುಮಾರು 4.51 ಲಕ್ಷ ಮನೆಗಳ ‘ಗೃಹ ಪ್ರವೇಶ’ದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ದೇಶದ ಪ್ರತಿಯೊಬ್ಬ ಪ್ರಜೆಗೂ ಸ್ವಂತ ಮನೆಯನ್ನು ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಒದಗಿಸುವುದು ಪ್ರಧಾನ ಮಂತ್ರಿಯವರ ನಿರಂತರ ಪ್ರಯತ್ನವಾಗಿದೆ. ಈ ನಿಟ್ಟಿನಲ್ಲಿ ಇದು ಮತ್ತೊಂದು ಹೆಜ್ಜೆಯಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮಧ್ಯಪ್ರದೇಶದಲ್ಲಿ ಇದುವರೆಗೆ ಸುಮಾರು 38 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ ಮತ್ತು 35,000 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಸುಮಾರು 29 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ.



(Release ID: 1869423) Visitor Counter : 101