ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರಾಖಂಡದ ಶ್ರೀ ಕೇದಾರನಾಥ ಧಾಮದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದ ಪ್ರಧಾನಿ

प्रविष्टि तिथि: 21 OCT 2022 12:17PM by PIB Bengaluru

·        ಗರ್ಭಗುಡಿಯಲ್ಲಿ ರುದ್ರಾಭಿಷೇಕ ನೆರವೇರಿಸಿದ ಪ್ರಧಾನಿ
·        ಆದಿ ಗುರು ಶಂಕರಾಚಾರ್ಯ ಸಮಾಧಿ ಸ್ಥಳಕ್ಕೆ ಭೇಟಿ 
·        ಮಂದಾಕಿನಿ ಅಷ್ಟಪಥ ಮತ್ತು ಸರಸ್ವತಿ ಅಷ್ಟಪಥದ ಪ್ರಗತಿ ಕಾಮಗಾರಿ ಪರಿಶೀಲನೆ
·        ಕೇದಾರನಾಥ ಧಾಮ್ ಯೋಜನೆಯ ಶ್ರಮಜೀವಿಗಳೊಂದಿಗೆ ಸಂವಾದ
 
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇದಾರನಾಥಕ್ಕೆ ಭೇಟಿ ನೀಡಿ ಶ್ರೀ ಕೇದಾರನಾಥ ದೇವಾಲಯದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದರು. ಸಾಂಪ್ರದಾಯಿಕ ಪಹಾಡಿ ಉಡುಪನ್ನು ಧರಿಸಿದ ಪ್ರಧಾನಮಂತ್ರಿಯವರು ಗರ್ಭಗುಡಿಯಲ್ಲಿ ರುದ್ರಾಭಿಷೇಕ ನೆರವೇರಿಸಿದರು ಮತ್ತು ನಂದಿ ಪ್ರತಿಮೆಯ ಮುಂದೆ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಮಂತ್ರಿಯವರು ಆದಿಗುರು ಶಂಕರಾಚಾರ್ಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಜೊತೆಗೆ ಮಂದಾಕಿನಿ ಅಷ್ಟಪಥ ಮತ್ತು ಸರಸ್ವತಿ ಅಷ್ಟಪಥದ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದರು.

ಕೇದಾರನಾಥ ಧಾಮ್ ಯೋಜನೆಯ ಶ್ರಮಜೀವಿಗಳೊಂದಿಗೂ ಪ್ರಧಾನಮಂತ್ರಿಯವರು ಸಂವಾದ ನಡೆಸಿದರು.

ಪ್ರಧಾನಮಂತ್ರಿಯವರೊಂದಿಗೆ ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಮತ್ತು ಉತ್ತರಾಖಂಡದ ರಾಜ್ಯಪಾಲ ನಿವೃತ್ತ ಜನರಲ್ ಗುರ್ಮಿತ್ ಸಿಂಗ್ ಸಹ ಉಪಸ್ಥಿತರಿದ್ದರು. 

ಕೇದಾರನಾಥವು ಅತ್ಯಂತ ಪ್ರಮುಖ ಹಿಂದೂ ದೇವಾಲಯಗಳಲ್ಲಿ ಒಂದಾಗಿದೆ. ಈ ಪ್ರದೇಶವು ಪೂಜ್ಯ ಸಿಖ್ ಯಾತ್ರಾಸ್ಥಳಗಳಲ್ಲಿ ಒಂದಾದ ಹೇಮಕುಂಡ್ ಸಾಹಿಬ್‌ಗೆ ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ಕೈಗೊಳ್ಳಲಾಗುತ್ತಿರುವ ಸಂಪರ್ಕ ಯೋಜನೆಗಳು ಧಾರ್ಮಿಕ ಪ್ರಾಮುಖ್ಯತೆಯ ಸ್ಥಳಗಳಗಳಿಗೆ ಸಂಪರ್ಕ ಸುಲಭಗೊಳಿಸುವ ಹಾಗೂ ಮೂಲಭೂತ ಸೌಕರ್ಯಗಳನ್ನು ಸುಧಾರಿಸುವತ್ತ ಪ್ರಧಾನ ಮಂತ್ರಿಯವರ ಬದ್ಧತೆಯನ್ನು ತೋರಿಸುತ್ತವೆ.

  

*****


(रिलीज़ आईडी: 1869952) आगंतुक पटल : 175
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam