ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶದ ರೇವಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಿಂದ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಘೋಷಣೆ
Posted On:
22 OCT 2022 11:26AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ರೇವಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಹತ್ತಿರದ ಬಂಧುಗಳಿಗೆ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿಯವರು ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವನ್ನು ಒದಗಿಸುತ್ತಿದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.
ಟ್ವಿಟ್ ನಲ್ಲಿ ಪ್ರಧಾನಮಂತ್ರಿಯವರು,;
“ಮಧ್ಯಪ್ರದೇಶದ ರೇವಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತ ಹೃದಯ ವಿದ್ರಾವಕವಾಗಿದೆ. ಇದರಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಸಂವೇದನೆ ಇದೆ. ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡುವ ಕಾರ್ಯದಲ್ಲಿ ತೊಡಗಿದೆ.”
"ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪಿಎಂಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿಯವರು ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು" ಎಂದು ತಿಳಿಸಿದ್ದಾರೆ.
***
(Release ID: 1870667)
Visitor Counter : 158
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam