ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದ ಸಂಗೀತ ವಾದ್ಯಗಳ ರಫ್ತಿನಲ್ಲಿನ ಹೆಚ್ಚಳಕ್ಕೆ ಪ್ರಧಾನಮಂತ್ರಿ ಶ್ಲಾಘನೆ

Posted On: 26 OCT 2022 9:12PM by PIB Bengaluru

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಸಂಗೀತ ವಾದ್ಯಗಳ ರಫ್ತಿನಲ್ಲಿ ಹೆಚ್ಚಳವಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. 2013ರ ಇದೇ ಅವಧಿಗೆ ಹೋಲಿಸಿದರೆ, 2022 ರ ಏಪ್ರಿಲ್-ಸೆಪ್ಟೆಂಬರ್ ನಲ್ಲಿ ಭಾರತದ ಸಂಗೀತ ವಾದ್ಯಗಳ ರಫ್ತು 3.5 ಪಟ್ಟು ಹೆಚ್ಚಾಗಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್ ಅವರ ಟ್ವೀಟ್ ಅನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿಯವರು, ಟ್ವೀಟ್ ನಲ್ಲಿ;

"ಇದು ಪ್ರೋತ್ಸಾಹದಾಯಕವಾಗಿದೆ. ಭಾರತೀಯ ಸಂಗೀತವು ವಿಶ್ವದಾದ್ಯಂತ ಜನಪ್ರಿಯತೆಯನ್ನು ಪಡೆಯುತ್ತಿರುವುದರಿಂದ, ಈ ಕ್ಷೇತ್ರದಲ್ಲಿ ಮತ್ತಷ್ಟು ಬೆಳೆಯಲು ಉತ್ತಮ ಅವಕಾಶವಿದೆ’ ಎಂದು ತಿಳಿಸಿದ್ದಾರೆ.

*****


(Release ID: 1871204) Visitor Counter : 110