ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬ್ರೆಜಿಲ್ನಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಿ ಅಭಿನಂದನೆ

Posted On: 31 OCT 2022 12:26PM by PIB Bengaluru

ಬ್ರೆಜಿಲ್ನ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಕುರಿತು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.

"ಬ್ರೆಜಿಲ್ನ ಅಧ್ಯಕ್ಷೀಯ ಚುನಾವಣೆಗಳಲ್ಲಿ ಜಯಗಳಿಸಿದ http://@LulaOficialಅವರಿಗೆ ಅಭಿನಂದನೆಗಳು. ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಾಢವಾಗಿಸಲು ಮತ್ತು ವಿಸ್ತರಿಸಲು ಹಾಗೂ ಜಾಗತಿಕ ವಿಷಯಗಳ ಬಗ್ಗೆ ನಮ್ಮ ಸಹಕಾರ ಕುರಿತು ನಿಕಟವಾಗಿ ಕೆಲಸ ಮಾಡಲು ನಾನು ಎದುರುನೋಡುತ್ತಿದ್ದೇನೆ" ಎಂದು ಪ್ರಧಾನಿಯವರು ತಮ್ಮ ಟ್ವೀಟ್ ನಲ್ಲಿ ಹೇಳಿದ್ದಾರೆ.

***


(Release ID: 1872237) Visitor Counter : 164