ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದುರ್ಘಟನೆ ಸಂಭವಿಸಿದ ಮೋರ್ಬಿಯಲ್ಲಿನ ಸ್ಥಿತಿಗತಿ ಪರಿಶೀಲನೆಗೆ ಪ್ರಧಾನ ಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆ


ರಕ್ಷಣಾ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಪ್ರಧಾನ ಮಂತ್ರಿಗಳಿಗೆ ಮಾಹಿತಿ ಸಲ್ಲಿಕೆ

ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡುವಂತೆ ಒತ್ತಿ ಹೇಳಿದ ಪ್ರಧಾನ ಮಂತ್ರಿಗಳು

प्रविष्टि तिथि: 31 OCT 2022 8:39PM by PIB Bengaluru

ದುರ್ಘಟನೆ ಸಂಭವಿಸಿದ ಮೋರ್ಬಿಯಲ್ಲಿನ ಸದ್ಯದ ಪರಿಸ್ಥಿತಿ ಕುರಿತಂತೆ ಪರಿಶೀಲನೆ ನಡೆಸಲು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಸೋಮವಾರ ಬೆಳಗ್ಗೆ ಗಾಂಧಿನಗರದಲ್ಲಿರುವ ರಾಜಭವನದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. 

ಹಿಂದೆಂದೂ ಕಂಡು ಕೇಳರಿಯದ ದುರ್ಘಟನೆ ಸಂಭವಿಸಿದ ಮೋರ್ಬಿಯಲ್ಲಿ ಸದ್ಯಕ್ಕೆ ಕೈಗೊಂಡಿರುವ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಪ್ರಧಾನ ಮಂತ್ರಿಗಳಿಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಘಟನೆ ಸಂಬಂಧ ಎಲ್ಲ ಸಂಭಾವ್ಯ ಕಾರಣಗಳ ಬಗ್ಗೆ ಎಲ್ಲ ದೃಷ್ಟಿಕೋನಗಳಿಂದ ಚರ್ಚೆ ನಡೆಯಿತು. ಘಟನೆಯಿಂದ ಸಂತ್ರಸ್ತರಾದ ಎಲ್ಲರಿಗೂ ಅಗತ್ಯವಿರುವ ಎಲ್ಲ ರೀತಿಯ ನೆರವು ಒದಗಿಸುವಂತೆ ಪ್ರಧಾನ ಮಂತ್ರಿಗಳು ಮತ್ತೊಮ್ಮೆ ಒತ್ತಿ ಹೇಳಿದರು.

ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಭಾಯ್‌ ಪಟೇಲ್‌, ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘ್ವಿ, ಗುಜರಾತ್‌ ಸರಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಸೇರಿದಂತೆ ಗೃಹ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಗೂ ಗುಜರಾತ್‌ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡಿದ್ದರು.

*******


(रिलीज़ आईडी: 1872924) आगंतुक पटल : 165
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam