ಪ್ರಧಾನ ಮಂತ್ರಿಯವರ ಕಛೇರಿ

ಮಧ್ಯಪ್ರದೇಶದ ಬೇತುಲ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಸಂತ್ರಸ್ತರಿಗೆ ʻಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿʼಯಿಂದ ಪರಿಹಾರ ಘೋಷಣೆ

Posted On: 04 NOV 2022 10:01AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಧ್ಯಪ್ರದೇಶದ ಬೇತುಲ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಮೋದಿ ಅವರು ಸಂತ್ರಸ್ತರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರ ಘೋಷಿಸಿದ್ದಾರೆ.
 
ಈ ಕುರಿತು ಪ್ರಧಾನಿ ಕಾರ್ಯಾಲಯ ಹೀಗೆ ಟ್ವೀಟ್‌ ಮಾಡಿದೆ: 

"ಮಧ್ಯಪ್ರದೇಶದ ಬೇತುಲ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರ ಶೀಘ್ರ  ಚೇತರಿಕೆಗೆ ಹಾರೈಸುವೆ. ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಿ

Pained by the loss of lives due to an accident in Betul, MP. Condolences to the bereaved families. May the injured recover soon. An ex-gratia of Rs. 2 lakh from PMNRF would be given to the next of kin of each deceased. Rs. 50,000 would be given to the injured: PM @narendramodi

— PMO India (@PMOIndia) November 4, 2022

*****



(Release ID: 1873707) Visitor Counter : 113