ಪ್ರಧಾನ ಮಂತ್ರಿಯವರ ಕಛೇರಿ
ಪ್ರವಾಸೋದ್ಯಮವನ್ನು ಉತ್ತೇಜಿಸುವ ಸೀಮಾ ದರ್ಶನದ ಭಾಗವಾಗಿ ನಡಬೆಟ್ ಮತ್ತು ಇತರ ಗಡಿ ಪ್ರದೇಶಗಳಿಗೆ ಭೇಟಿ ನೀಡುವಂತೆ ನಾಗರಿಕರಿಗೆ ಪ್ರಧಾನಮಂತ್ರಿ ಮನವಿ
प्रविष्टि तिथि:
05 NOV 2022 10:59AM by PIB Bengaluru
ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸಲು ಸೀಮಾ ದರ್ಶನದ ಭಾಗವಾಗಿ ನಡಬೆಟ್ ಮತ್ತು ಇತರ ಗಡಿ ಪ್ರದೇಶಗಳಿಗೆ ಭೇಟಿ ನೀಡುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗರಿಕರನ್ನು ಒತ್ತಾಯಿಸಿದ್ದಾರೆ.
ಭಾರತದ ಈಶಾನ್ಯ ಪ್ರದೇಶದ ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಅಭಿವೃದ್ಧಿ ಸಚಿವ ಜಿ ಕಿಶನ್ ರೆಡ್ಡಿ ಅವರ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.
"ಸೀಮಾ ದರ್ಶನ ಯೋಜನೆಯು ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಆಯಾಮವನ್ನು ನೀಡುತ್ತದೆ. ಗಡಿಗಳಲ್ಲಿ ವಾಸಿಸುವವರ ಚೈತನ್ಯವನ್ನು ಪ್ರಶಂಸಿಸಲು ಇದು ಅವಕಾಶವನ್ನು ಒದಗಿಸುತ್ತದೆ.
ನಡಬೆಟ್ ಮತ್ತು ಇತರ ಗಡಿ ಪ್ರದೇಶಗಳಿಗೆ ಭೇಟಿ ನೀಡುವಂತೆ ನಾನು ನಿಮ್ಮೆಲ್ಲರನ್ನು ಒತ್ತಾಯಿಸುತ್ತೇನೆ.” ಎಂದು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ.
***
(रिलीज़ आईडी: 1873983)
आगंतुक पटल : 149
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam