ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ ಜಯ ಗಳಿಸಿದ ಬೆಂಜಮಿನ್ ನೆತನ್ಯಾಹು ಅವರನ್ನು ಅಭಿನಂದಿಸಿದ ಪ್ರಧಾನಿ ಮೋದಿ 


ಭಾರತ-ಇಸ್ರೇಲ್ ವ್ಯೂಹಾತ್ಮಕ ಪಾಲುದಾರಿಕೆಗೆ ಆದ್ಯತೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಯಾಯಿರ್‌ ಲಾಪಿಡ್ ಅವರಿಗೂ ಶ್ರೀ ಮೋದಿ ಅವರು ಧನ್ಯವಾದ ಅರ್ಪಿಸಿದ್ದಾರೆ

Posted On: 04 NOV 2022 9:03AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯಕ್ಕಾಗಿ ಬೆಂಜಮಿನ್ ನೆತನ್ಯಾಹು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತ-ಇಸ್ರೇಲ್ ವ್ಯೂಹಾತ್ಮಕ ಪಾಲುದಾರಿಕೆಗೆ ಆದ್ಯತೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಯಾಯಿರ್‌ ಲಾಪಿಡ್ ಅವರಿಗೂ ಶ್ರೀ ಮೋದಿ ಅವರು ಧನ್ಯವಾದ ಅರ್ಪಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಹೀಗೆ ಹೇಳಿದ್ದಾರೆ:

"ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತ ನೆತನ್ಯಾಹುhttp://@netanyahu ಅವರಿಗೆ ಅಭಿನಂದನೆಗಳು. ಭಾರತ-ಇಸ್ರೇಲ್ ವ್ಯೂಹಾತ್ಮಕ ಪಾಲುದಾರಿಕೆಯನ್ನು ಆಳಗೊಳಿಸಲು ನಮ್ಮ ಜಂಟಿ ಪ್ರಯತ್ನಗಳನ್ನು ಮುಂದುವರಿಸಲು ನಾನು ಕಾತುರನಾಗಿದ್ದೇನೆ.ʼʼ

"ಭಾರತ-ಇಸ್ರೇಲ್ ವ್ಯೂಹಾತ್ಮಕ ಪಾಲುದಾರಿಕೆಗೆ ನಿಮ್ಮ ಆದ್ಯತೆಗಾಗಿ ಯಾಯಿರ್‌ ಲಾಪಿಡ್‌ http://@yairlapidಅವರಿಗೂ ಧನ್ಯವಾದಗಳು. ನಮ್ಮ ಜನರ ಪರಸ್ಪರ ಲಾಭಕ್ಕಾಗಿ ನಮ್ಮ ಫಲಪ್ರದವಾದ ವಿಚಾರಗಳ ವಿನಿಮಯವನ್ನು ಮುಂದುವರಿಸಲು ನಾನು ಆಶಿಸುತ್ತೇನೆ."

*****


(Release ID: 1874088) Visitor Counter : 140