ಪ್ರಧಾನ ಮಂತ್ರಿಯವರ ಕಛೇರಿ
ಜಮ್ಮು ಮತ್ತು ಕಾಶ್ಮೀರದಲ್ಲಿ ವೈದ್ಯಕೀಯ ಶಿಕ್ಷಣದ ಹೊಸ ಯುಗವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
Posted On:
08 NOV 2022 7:57PM by PIB Bengaluru
ಜಮ್ಮು ಮತ್ತು ಕಾಶ್ಮೀರದ 20 ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಾದ್ಯಂತ 265 ಡಿಎನ್‌ಬಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಮಂಜೂರು ಮಾಡಿದ ಸರ್ಕಾರ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ವೈದ್ಯಕೀಯ ಶಿಕ್ಷ ಣದ ಹೊಸ ಯುಗವನ್ನು ಶ್ಲಾಘಿಸಿದ್ದಾರೆ. 20 ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಾದ್ಯಂತ 265 ಡಿಎನ್‌ಬಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಮಂಜೂರು ಮಾಡುವ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಅವರು, ಇದು ಯುವಕರನ್ನು ಸಶಕ್ತಗೊಳಿಸುವ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ವೈದ್ಯಕೀಯ ಮೂಲಸೌಕರ್ಯಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಒಂದು ಪ್ರಮುಖ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಮನ್ಸುಖ್ ಮಾಂಡವಿಯಾ ಅವರ ಟ್ವೀಟ್ ಅನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ ಅವರು, ‘‘ ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ಯುವಕರನ್ನು ಸಬಲೀಕರಣಗೊಳಿಸುವ ಮತ್ತು ವೈದ್ಯಕೀಯ ಮೂಲಸೌಕರ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಪ್ರಮುಖ ಪ್ರಯತ್ನವಾಗಿದೆ,’’ ಎಂದಿದ್ದಾರೆ.
*****
(Release ID: 1874598)
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam