ಗೃಹ ವ್ಯವಹಾರಗಳ ಸಚಿವಾಲಯ

ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ದೇಶಾದ್ಯಂತದ ಗುಪ್ತಚರ ದಳ (ಐಬಿ) ಅಧಿಕಾರಿಗಳ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು ಮತ್ತು ದೇಶದ ಆಂತರಿಕ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು


ಭಯೋತ್ಪಾದನೆ, ಉಗ್ರವಾದದ ಬೆದರಿಕೆಗಳು, ಸೈಬರ್ ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳು, ಗಡಿ ಸಂಬಂಧಿತ ಅಂಶಗಳು ಮತ್ತು ರಾಷ್ಟ್ರದ ಸಮಗ್ರತೆ ಮತ್ತು ಸ್ಥಿರತೆಗೆ ಗಡಿಯಾಚೆಗಿನ ಬೆದರಿಕೆಗಳು ಸೇರಿದಂತೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ವ್ಯಾಪಕ ಚರ್ಚೆಗಳು ನಡೆದವು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭದ್ರತೆಯ ಎಲ್ಲ ಆಯಾಮಗಳನ್ನು ಬಲಪಡಿಸುವ ಮೂಲಕ ರಾಷ್ಟ್ರದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ

ಸ್ವಾತಂತ್ರ್ಯದ ನಂತರ ದೇಶದಲ್ಲಿ ಶಾಂತಿಯನ್ನು ಕಾಪಾಡುವಲ್ಲಿ ಗುಪ್ತಚರ ದಳವು ಯಾವುದೇ ನಿರೀಕ್ಷೆಗಳಿಲ್ಲದೆ ಅನಾಮಧೇಯವಾಗಿ ಮಹತ್ವದ ಕೊಡುಗೆ ನೀಡಿದೆ  

ನಮ್ಮ ಹೋರಾಟವು ಭಯೋತ್ಪಾದನೆ ಮತ್ತು ಅದಕ್ಕೆ ಬೆಂಬಲ ನೀಡುವ ವ್ಯವಸ್ಥೆಯ ವಿರುದ್ಧ, ನಾವು ಇವೆರಡರ ವಿರುದ್ಧ ಕಟ್ಟುನಿಟ್ಟಾಗಿ ಹೋರಾಡದ ಹೊರತು ಭಯೋತ್ಪಾದನೆಯ ವಿರುದ್ಧ ಜಯ ಸಾಧಿಸಲು ಸಾಧ್ಯವಿಲ್ಲ ರಾಜ್ಯಗಳ ಭಯೋತ್ಪಾದನೆ ನಿಗ್ರಹ ಮತ್ತು ಮಾದಕವಸ್ತು ನಿಗ್ರಹ ಸಂಸ್ಥೆಗಳ ನಡುವೆ ಮಾಹಿತಿ ಹಂಚಿಕೆ ಮತ್ತು ಸಂವಹನವನ್ನು ಮತ್ತಷ್ಟು ಬಲಪಡಿಸುವ ಅವಶ್ಯಕತೆಯಿದೆ

ಎಡಪಂಥೀಯ ಉಗ್ರವಾದವನ್ನು ನಿಯಂತ್ರಿಸಲು, ಅದರ ಆರ್ಥಿಕ ಮತ್ತು ವ್ಯವಸ್ಥಾಪನಾ ಬೆಂಬಲ ವ್ಯವಸ್ಥೆಯನ್ನು ನಿರ್ಮೂಲನಗೊಳಿಸಬೇಕಿದೆ

ನಾವು ದೇಶದ ಕರಾವಳಿ ಭದ್ರತೆಯನ್ನು ಅಭೇದ್ಯವನ್ನಾಗಿ ಮಾಡಬೇಕಿದೆ, ಇದಕ್ಕಾಗಿ ನಾವು ಸಣ್ಣ ಮತ್ತು ಅತ್ಯಂತ ಪ್ರತ್ಯೇ

Posted On: 09 NOV 2022 7:49PM by PIB Bengaluru

ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ನಡೆದ ದೇಶದಾದ್ಯಂತದ ಗುಪ್ತಚರ ದಳ (ಐಬಿ) ಅಧಿಕಾರಿಗಳ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು ಮತ್ತು ದೇಶದ ಆಂತರಿಕ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸಭೆಯಲ್ಲಿ ಭಯೋತ್ಪಾದನೆ, ಉಗ್ರವಾದದ ಬೆದರಿಕೆ, ಸೈಬರ್ ಭದ್ರತೆ ಸಂಬಂಧಿತ ಸಮಸ್ಯೆಗಳು, ಗಡಿ ಸಂಬಂಧಿತ ಅಂಶಗಳು ಮತ್ತು ರಾಷ್ಟ್ರದ ಸಮಗ್ರತೆ ಮತ್ತು ಸ್ಥಿರತೆಗೆ ಗಡಿಯಾಚೆಗಿನ ಬೆದರಿಕೆಗಳು ಸೇರಿದಂತೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ವ್ಯಾಪಕ ಚರ್ಚೆಗಳನ್ನು ನಡೆಸಲಾಯಿತು.

 

107A9715

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಭದ್ರತೆಯ ಎಲ್ಲ ಆಯಾಮಗಳನ್ನು ಬಲಪಡಿಸುವ ಮೂಲಕ ರಾಷ್ಟ್ರದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಮತ್ತು ಕಳೆದ ಎಂಟು ವರ್ಷಗಳಲ್ಲಿ ಆಂತರಿಕ ಭದ್ರತೆಯನ್ನು ಬಲಪಡಿಸಲು ಹಲವು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವರು ಹೇಳಿದರು. 

ಸ್ವಾತಂತ್ರ್ಯದ ನಂತರ ದೇಶದಲ್ಲಿ ಶಾಂತಿಯನ್ನು ಕಾಪಾಡುವಲ್ಲಿ ಗುಪ್ತಚರ ದಳವು ಯಾವುದೇ ನಿರೀಕ್ಷೆಗಳಿಲ್ಲದೆ ಅನಾಮಧೇಯವಾಗಿ ಬಹಳ ಮಹತ್ವದ ಕೊಡುಗೆ ನೀಡಿದೆ ಎಂದು ಶ್ರೀ ಅಮಿತ್ ಶಾ ಹೇಳಿದರು. ನಮ್ಮ ಹೋರಾಟವು ಭಯೋತ್ಪಾದನೆ ಮತ್ತು ಅದರ ಬೆಂಬಲ ವ್ಯವಸ್ಥೆಯ ವಿರುದ್ಧವಾಗಿದೆ, ನಾವು ಇವೆರಡರ ವಿರುದ್ಧ ಕಟ್ಟುನಿಟ್ಟಾಗಿ ಹೋರಾಡದ ಹೊರತು ಭಯೋತ್ಪಾದನೆಯ ವಿರುದ್ಧ ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

 

107A9722 (1)


ಭಯೋತ್ಪಾದನೆ ನಿಗ್ರಹ ಮತ್ತು ರಾಜ್ಯಗಳ ಮಾದಕ ವಸ್ತು ನಿಗ್ರಹ ಸಂಸ್ಥೆಗಳ ನಡುವಿನ ಸಂಪರ್ಕವನ್ನು ಹೆಚ್ಚಿಸುವ ಮತ್ತು ಮಾಹಿತಿ ಹಂಚಿಕೆ ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವನ್ನು ಶ್ರೀ ಅಮಿತ್ ಶಾ ಒತ್ತಿ ಹೇಳಿದರು. ಎಡಪಂಥೀಯ ಉಗ್ರವಾದವನ್ನು ಅದರ ಆರ್ಥಿಕ ಮತ್ತು ವ್ಯವಸ್ಥಾಪನಾ ಬೆಂಬಲ ವ್ಯವಸ್ಥೆಯನ್ನು ನಿರ್ಮೂಲನೆ ಮಾಡುವ ಮೂಲಕ ನಿಯಂತ್ರಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

 

107A9727 (1)

 

ನಾವು ದೇಶದ ಕರಾವಳಿ ಭದ್ರತೆಯನ್ನು ಸಹ ಅಭೇದ್ಯವನ್ನಾಗಿ ಮಾಡಬೇಕಾಗಿದೆ ಮತ್ತು ಇದಕ್ಕಾಗಿ ನಾವು ಸಣ್ಣ ಮತ್ತು ಅತ್ಯಂತ ಪ್ರತ್ಯೇಕವಾಗಿರುವ ಬಂದರಿನ ಮೇಲೂ ನಿಗಾ ಇಡಬೇಕು ಎಂದು ಕೇಂದ್ರ ಗೃಹ ಸಚಿವರು ಹೇಳಿದರು. ಮಾದಕ ವಸ್ತು ದೇಶದ ಯುವಕರನ್ನು ಹಾಳುಮಾಡುವುದಲ್ಲದೆ ಅದರಿಂದ ಗಳಿಸುವ ಹಣವು ದೇಶದ ಆಂತರಿಕ ಭದ್ರತೆಯ ಮೇಲೂ ಪರಿಣಾಮ ಬೀರುತ್ತದೆ, ಅದಕ್ಕಾಗಿಯೇ ನಾವು ಅದರ ಸಂಪೂರ್ಣ ನಿರ್ಮೂಲನೆಗೆ ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಶ್ರೀ ಶಾ ಹೇಳಿದರು. ಡ್ರೋನ್‌ಗಳ ಮೂಲಕ ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆಯನ್ನು ತಡೆಯಲು ನಾವು ಡ್ರೋನ್ ನಿಗ್ರಹ ತಂತ್ರಜ್ಞಾನವನ್ನು ಗರಿಷ್ಠವಾಗಿ ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು.

 

******



(Release ID: 1874896) Visitor Counter : 142