ಪ್ರಧಾನ ಮಂತ್ರಿಯವರ ಕಛೇರಿ
ಮೌಲಾನ ಆಜಾದ್ ಜನ್ಮ ದಿನದ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
प्रविष्टि तिथि:
11 NOV 2022 10:04AM by PIB Bengaluru
ಮೌಲಾನ ಆಜಾದ್ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. ಶಿಕ್ಷಣದ ಬಗ್ಗೆ ಅವರು ಹೊಂದಿರುವ ಉತ್ಸಾಹ ಮತ್ತು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ಕೊಡುಗೆಯನ್ನು ಪ್ರಧಾನಮಂತ್ರಿ ಅವರು ಸ್ಮರಿಸಿಕೊಂಡಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ
“ಮೌಲಾನ ಆಜಾದ್ ಅವರನ್ನು ಅವರ ಜನ್ಮ ದಿನದಂದು ಸ್ಮರಿಸಿಕೊಳ್ಳುತ್ತಿದ್ದೇನೆ. ಅವರು ಪರಿಪೂರ್ಣ ಪಾಂಡಿತ್ಯದ ಸ್ವಭಾವ ಮತ್ತು ಬೌದ್ಧಿಕ ಶಕ್ತಿಗಾಗಿ ವ್ಯಾಪಕ ಮೆಚ್ಚುಗೆ ಪಡೆದಿದ್ದರು. ಅವರು ನಮ್ಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿಯಲ್ಲಿದ್ದರು ಮತ್ತು ಇತರೆ ಪ್ರಮುಖ ಪ್ರಖರ ನಾಯಕರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಿದ್ದರು. ಶಿಕ್ಷಣ ಅವರಿಗೆ ಮಹತ್ವದ ವಿಷಯವಾಗಿತ್ತು.” ಎಂದು ಹೇಳಿದ್ದಾರೆ.
*******
(रिलीज़ आईडी: 1875136)
आगंतुक पटल : 221
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam