ಪ್ರಧಾನ ಮಂತ್ರಿಯವರ ಕಛೇರಿ
ಬಾಲಿಯಲ್ಲಿ ಜಿ-20 ಶೃಂಗಸಭೆಯ ವೇಳೆ ಅಮೆರಿಕದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿಯವರ ಸಭೆ
प्रविष्टि तिथि:
15 NOV 2022 3:24PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಲಿಯಲ್ಲಿಂದು ಜಿ-20 ನಾಯಕರ ಶೃಂಗಸಭೆಯ ವೇಳೆ ಅಮೆರಿಕದ ಅಧ್ಯಕ್ಷ ಮಾನ್ಯ ಶ್ರೀ ಜೋಸೆಫ್ ಆರ್. ಬಿಡೆನ್ ಅವರನ್ನು ಭೇಟಿಯಾದರು.
ಭವಿಷ್ಯದ ನಿರ್ಣಾಯಕ ಮತ್ತು ಹೊರಹೊಮ್ಮುತ್ತಿರುವ ತಂತ್ರಜ್ಞಾನಗಳು, ಸುಧಾರಿತ ಕಂಪ್ಯೂಟಿಂಗ್, ಕೃತಕ ಬುದ್ಧಿಮತ್ತೆ ಆಧಾರಿತ ಕ್ಷೇತ್ರಗಳಲ್ಲಿನ ಸಹಕಾರ ಸೇರಿದಂತೆ ಭಾರತ ಮತ್ತು ಅಮೆರಿಕ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಯನ್ನು ಸುದೃಢಗೊಳಿಸುವ ಕುರಿತಂತೆ ಅವರು ಪರಾಮರ್ಶಿಸಿದರು. ಕ್ವಾಡ್, ಐ2ಯು2 ಮುಂತಾದ ಹೊಸ ಗುಂಪುಗಳಲ್ಲಿ ಭಾರತ ಮತ್ತು ಅಮೆರಿಕ ನಡುವಿನ ನಿಕಟ ಸಹಕಾರದ ಬಗ್ಗೆ ಅವರು ಸಂತೃಪ್ತಿ ವ್ಯಕ್ತಪಡಿಸಿದರು.
ಇಬ್ಬರೂ ನಾಯಕರು ಸಮಕಾಲೀನ ಜಾಗತಿಕ ಮತ್ತು ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಭಾರತ-ಅಮೆರಿಕ ಪಾಲುದಾರಿಕೆಯನ್ನು ಬಲಪಡಿಸಲು ಅಧ್ಯಕ್ಷ ಬೈಡನ್ ಅವರ ನಿರಂತರ ಬೆಂಬಲಕ್ಕಾಗಿ ಪ್ರಧಾನಮಂತ್ರಿ ಮೋದಿ ಧನ್ಯವಾದ ಅರ್ಪಿಸಿದರು. ಭಾರತದ ಜಿ-20 ಅಧ್ಯಕ್ಷತೆಯ ಅವಧಿಯಲ್ಲಿ ಎರಡೂ ದೇಶಗಳು ನಿಕಟ ಸಮನ್ವಯವನ್ನು ಕಾಯ್ದುಕೊಳ್ಳುವುದನ್ನು ಮುಂದುವರಿಸುತ್ತವೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
****
(रिलीज़ आईडी: 1876143)
आगंतुक पटल : 184
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam