ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಿ ಮೋದಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.


ಮೃತರ ಹತ್ತಿರದ ಬಂಧುಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ನಿಂದ ಪರಿಹಾರವನ್ನು ಘೋಷಿಸಿದ್ದಾರೆ.

प्रविष्टि तिथि: 16 NOV 2022 9:28AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿತದಿಂದಾದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್)  ಪರಿಹಾರವನ್ನು ಘೋಷಿಸಲಾಗಿದೆ.

ಪ್ರಧಾನಿ ಕಚೇರಿ ಟ್ವೀಟ್ ಮಾಡಿದ್ದು ಹೀಗೆ;

ಮಿಜೋರಾಂನ  ಕಲ್ಲು ಕ್ವಾರಿ ಕುಸಿತ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ  ಸಂತಾಪಗಳನ್ನು ಸೂಚಿಸುತ್ತಾ, ಪ್ರಧಾನ ಮಂತ್ರಿಗಳು ಪಿಎಂಎನ್‌ಆರ್‌ಎಫ್‌ನಿಂದ ಮೃತರ ಸಂಬಂಧಿಕರಿಗೆ 2 ಲಕ್ಷ ರೂ . ಧನಸಹಾಯ (ಎಕ್ಸ್-ಗ್ರೇಷಿಯಾ) ನೀಡಲಾಗುವುದಾಗಿಯೂ ಹಾಗೂ ಗಾಯಾಳುಗಳಿಗೆ ರೂ.  50,000/- ಘೋಷಿಸಿದ್ದಾರೆ‌.

***


(रिलीज़ आईडी: 1876342) आगंतुक पटल : 210
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam