ಪ್ರಧಾನ ಮಂತ್ರಿಯವರ ಕಛೇರಿ

ಬಾಲಿಯಲ್ಲಿ ಜಿ-20 ಶೃಂಗಸಭೆಯ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಪ್ರಧಾನಿಯೊಂದಿಗೆ ಪ್ರಧಾನ ಮಂತ್ರಿ ಮೋದಿಯವರ ಸಭೆ

Posted On: 16 NOV 2022 3:06PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಾಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಪ್ರಧಾನಮಂತ್ರಿ  ಶ್ರೀ ಆಂಥೋನಿ ಅಲ್ಬನೀಸ್ ಅವರನ್ನು ಭೇಟಿ ಮಾಡಿದರು

ಇಬ್ಬರೂ ನಾಯಕರು ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದ ಅಡಿಯಲ್ಲಿ ಉಭಯ ದೇಶಗಳ ನಡುವಿನ ಸಂಬಂಧಗಳ ಅತ್ಯುತ್ತಮ ಸ್ಥಿತಿ ಮತ್ತು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಿಯಮಿತವಾಗಿ ನಡೆಯುತ್ತಿರುವ ಉನ್ನತ ಮಟ್ಟದ ಸಂವಾದಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ರಕ್ಷಣೆ, ವ್ಯಾಪಾರ, ಶಿಕ್ಷಣ, ಶುದ್ಧ ಇಂಧನ ಮತ್ತು ಉಭಯ ದೇಶದ ಪ್ರಜೆಗಳ ನಡುವಿನ ಬಾಂಧವ್ಯ ಸೇರಿದಂತೆ ವೈವಿಧ್ಯಮಯ ವಲಯಗಳಲ್ಲಿ ಸಹಕಾರವನ್ನು ಗಾಢವಾಗಿಸುವಲ್ಲಿ ಮಾಡಿರುವ ಪ್ರಗತಿಯನ್ನು ಅವರಿಬ್ಬರು ಪರಿಶೀಲಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಸಾಂಸ್ಥಿಕ ಸಹಭಾಗಿತ್ವ, ವಿಶೇಷವಾಗಿ ಉನ್ನತ ಶಿಕ್ಷಣ, ವೃತ್ತಿಪರ ಶಿಕ್ಷಣ, ತರಬೇತಿ ಮತ್ತು ಸಾಮರ್ಥ್ಯ ವೃದ್ಧಿ ಕುರಿತು ವಿವರವಾಗಿ ಚರ್ಚಿಸಲಾಯಿತು.

ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳು,  ಸ್ಥಿರ ಮತ್ತು ಶಾಂತಿಯುತ ಇಂಡೋ-ಪೆಸಿಫಿಕ್ ಪ್ರದೇಶ, ಹವಾಮಾನ ಸಂಬಂಧಿತ ವಿಷಯಗಳು ಮತ್ತು ಭಾರತದ ಜಿ20 ಅಧ್ಯಕ್ಷತೆಯ  ಕುರಿತು ಉಭಯ ದೇಶಗಳ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಭಾರತಕ್ಕೆ ಪ್ರಧಾನಿ ಅಲ್ಬನೀಸ್ ಅವರು ಭವಿಷ್ಯದಲ್ಲಿ ಆದಷ್ಟು ಬೇಗ ಭೇಟಿ ನೀಡುವುದನ್ನು ಎದುರು ನೋಡುತ್ತಿರುವುದಾಗಿ ಪ್ರಧಾನಮಂತ್ರಿ ಮೋದಿಯವರು ಹೇಳಿದ್ದಾರೆ.

*****



(Release ID: 1876482) Visitor Counter : 70