ಪ್ರಧಾನ ಮಂತ್ರಿಯವರ ಕಛೇರಿ
ಬಾಲಿಯಲ್ಲಿ ಜಿ-20 ಶೃಂಗಸಭೆಯ ಸಂದರ್ಭದಲ್ಲಿ ಯುನೈಟೆಡ್ ಕಿಂಗ್ಡಂನ ಪ್ರಧಾನಿಯೊಂದಿಗೆ ಪ್ರಧಾನ ಮಂತ್ರಿ ಮೋದಿಯವರ ಸಭೆ
Posted On:
16 NOV 2022 3:47PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಾಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ಸಂದರ್ಭದಲ್ಲಿ ಯುನೈಟೆಡ್ ಕಿಂಗ್ಡಂನ ಪ್ರಧಾನ ಮಂತ್ರಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿದರು
ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿದೆ . ಅಧಿಕಾರ ಸ್ವೀಕರಿಸಿದ ಪ್ರಧಾನಿ ಸುನಕ್ ಅವರನ್ನು ಪ್ರಧಾನಮಂತ್ರಿ ಮೋದಿಯವರು ಅಭಿನಂದಿಸಿದರು.
ಉಭಯ ನಾಯಕರು ವಿಶಾಲ ವ್ಯಾಪ್ತಿಯ ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವ ಮತ್ತು ಭವಿಷ್ಯದ ಸಂಬಂಧಗಳಿಗಾಗಿ ಮಾರ್ಗಸೂಚಿ 2030 ರ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಜಿ20 ಮತ್ತು ಕಾಮನ್ವೆಲ್ತ್ ಸೇರಿದಂತೆ ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಒಟ್ಟಾಗಿ ಕೆಲಸ ಮಾಡುವ ಮಹತ್ವವನ್ನು ಉಭಯ ನಾಯಕರು ಶ್ಲಾಘಿಸಿದರು.
ವ್ಯಾಪಾರ, ಸಾಗಾಣಿಕೆ, ರಕ್ಷಣೆ ಮತ್ತು ಭದ್ರತೆಯಂತಹ ಸಹಯೋಗದ ಪ್ರಮುಖ ಕ್ಷೇತ್ರಗಳ ಮೇಲೆ ಚರ್ಚೆಯು ನಡೆಯಿತು.
*****
(Release ID: 1876483)
Visitor Counter : 146
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam