ಪ್ರಧಾನ ಮಂತ್ರಿಯವರ ಕಛೇರಿ

ಬಾಲಿಯಲ್ಲಿ ನಡೆದ ಜಿ-20 ಶೃಂಗಸಭೆಯ ವೇಳೆ ಇಟಲಿಯ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿಯವರ ಸಭೆ

Posted On: 16 NOV 2022 2:27PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಾಲಿಯಲ್ಲಿ ನಡೆದ ಜಿ-20 ಶೃಂಗಸಭೆಯ ವೇಳೆ ಇಟಲಿಯ ಪ್ರಧಾನಮಂತ್ರಿ ಘನತೆವೆತ್ತ ಶ್ರೀಮತಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾದರು. 

ಇಟಲಿಯ ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಮೆಲೋನಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು. ವ್ಯಾಪಾರ ಮತ್ತು ಹೂಡಿಕೆ, ಭಯೋತ್ಪಾದನೆ ನಿಗ್ರಹ ಮತ್ತು ಜನರ ನಡುವಿನ ಬಾಂಧವ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಆಳಗೊಳಿಸುವ ಬಗ್ಗೆ ಇಬ್ಬರೂ ನಾಯಕರು ಚರ್ಚಿಸಿದರು.

ಇಬ್ಬರೂ ನಾಯಕರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ-ಇಟಲಿ ರಾಜತಾಂತ್ರಿಕ ಬಾಂಧವ್ಯದ 75ನೇ ವರ್ಷ ಆಚರಿಸಲು ಮತ್ತು ಮುಂದಿನ ವರ್ಷ ಜಿ-20 ಶೃಂಗಸಭೆಗಾಗಿ ಪ್ರಧಾನಮಂತ್ರಿ ಮೆಲೋನಿ ಅವರನ್ನು ಭಾರತಕ್ಕೆ ಬರಮಾಡಿಕೊಳ್ಳಲು ಎದುರು ನೋಡುತ್ತಿರುವುದಾಗಿ ತಿಳಿಸಿದರು.

*****



(Release ID: 1876529) Visitor Counter : 109