ಪ್ರಧಾನ ಮಂತ್ರಿಯವರ ಕಛೇರಿ
ನವೆಂಬರ್ 18 ರಂದು ನಡೆಯಲಿರುವ 3ನೇ ' ನೋ ಮನಿ ಫಾರ್ ಟೆರರ್ ' (ಭಯೋತ್ಪಾದನೆಗೆ ಹಣವಿಲ್ಲ) ಭಯೋತ್ಪಾದನೆ ನಿಗ್ರಹ ಹಣಕಾಸು ಕುರಿತ ಸಚಿವರ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ.
Posted On:
17 NOV 2022 2:27PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 18ರಂದು ಬೆಳಗ್ಗೆ 9.30ಕ್ಕೆ ನವದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್ ನಲ್ಲಿ ನಡೆಯಲಿರುವ ಮೂರನೇ ' ನೋ ಮನಿ ಫಾರ್ ಟೆರರ್ ' (ಎನ್ ಎಂಎಫ್ ಟಿ) ಭಯೋತ್ಪಾದನಾ ನಿಗ್ರಹ ಹಣಕಾಸು ಕುರಿತ ಸಚಿವರ ಸಮ್ಮೇಳನದಲ್ಲಿ ಉದ್ಘಾಟನಾ ಭಾಷಣ ಮಾಡಲಿದ್ದಾರೆ.
ನವೆಂಬರ್ 18-19 ರಂದು ಆಯೋಜಿಸಲಾಗಿರುವ ಎರಡು ದಿನಗಳ ಸಮ್ಮೇಳನವು, ಭಯೋತ್ಪಾದನೆ ನಿಗ್ರಹ ಹಣಕಾಸು ಮತ್ತು ಮುಂಬರುವ ಸವಾಲುಗಳನ್ನು ಎದುರಿಸಲು ಅಗತ್ಯವಿರುವ ಕ್ರಮಗಳ ಬಗ್ಗೆ ಹಾಗು ಪ್ರಸ್ತುತ ಅಂತಾರಾಷ್ಟ್ರೀಯ ಆಡಳಿತದ ಪರಿಣಾಮಕಾರಿತ್ವದ ಬಗ್ಗೆ ಚರ್ಚಿಸಲು ಭಾಗವಹಿಸುವ ರಾಷ್ಟ್ರಗಳು ಮತ್ತು ಸಂಸ್ಥೆಗಳಿಗೆ ಒಂದು ವಿಶಿಷ್ಟ ವೇದಿಕೆಯನ್ನು ಒದಗಿಸುತ್ತದೆ.
ಈ ಸಮಾವೇಶವು ಹಿಂದಿನ ಎರಡು ಸಮ್ಮೇಳನಗಳ ಲಾಭ ಮತ್ತು ಕಲಿಕೆಗಳನ್ನು ಆಧರಿಸಿದೆ. (2018ರ ಏಪ್ರಿಲ್ ನಲ್ಲಿ ಪ್ಯಾರಿಸ್ ನಲ್ಲಿ ಮತ್ತು 2019 ರ ನವೆಂಬರ್ ನಲ್ಲಿ ಮೆಲ್ಬೋರ್ನ್ ನಲ್ಲಿ ನಡೆಯಿತು) ಭಯೋತ್ಪಾದಕರಿಗೆ ಹಣಕಾಸು ನಿರಾಕರಣೆ, ಜಾಗತಿಕ ಸಹಕಾರವನ್ನು ಹೆಚ್ಚಿಸಲು ಮತ್ತು ಅನುಮತಿಯ ಅಧಿಕಾರವ್ಯಾಪ್ತಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವುದು ಇದರ ಉದ್ದೇಶ. ಸಚಿವರು, ಬಹುಪಕ್ಷೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಹಣಕಾಸು ಕ್ರಿಯಾ ಕಾರ್ಯಪಡೆ (ಎಫ್ಎಟಿಎಫ್) ಪ್ರತಿನಿಧಿಗಳ ಮುಖ್ಯಸ್ಥರು ಸೇರಿದಂತೆ ವಿಶ್ವದಾದ್ಯಂತದ ಸುಮಾರು 450 ಪ್ರತಿನಿಧಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.
ಸಮ್ಮೇಳನದ ನಾಲ್ಕು ಗೋಷ್ಠಿಗಳಲ್ಲಿ ' ಭಯೋತ್ಪಾದನಾ ವಲಯದಲ್ಲಿ ಜಾಗತಿಕ ಪ್ರವೃತ್ತಿಗಳು ಮತ್ತು ಭಯೋತ್ಪಾದಕರಿಗೆ ಹಣಕಾಸು ', ' ಭಯೋತ್ಪಾದನೆಗೆ ಹಣಕಾಸು ಒದಗಿಸಲು ಔಪಚಾರಿಕ ಮತ್ತು ಅನೌಪಚಾರಿಕ ಮಾರ್ಗಗಳ ಬಳಕೆ ', ' ಉದಯೋನ್ಮುಖ ತಂತ್ರಜ್ಞಾನಗಳು ಮತ್ತು ಭಯೋತ್ಪಾದನೆಗೆ ಹಣಕಾಸು ' ಮತ್ತು ' ಭಯೋತ್ಪಾದಕತೆಗೆ ಹಣಕಾಸು ಒದಗಿಸುವುದನ್ನು ನಿಗ್ರಹಿಸಲು ಅಂತಾರಾಷ್ಟ್ರೀಯ ಸಹಕಾರ ' ಕುರಿತು ಚರ್ಚೆ ನಡೆಯಲಿದೆ.
*****
(Release ID: 1876809)
Visitor Counter : 210
Read this release in:
Assamese
,
English
,
Urdu
,
Marathi
,
Hindi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam