ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಭಾರತದ ಮಾಜಿ ರಾಜತಾಂತ್ರಿಕ ಶ್ರೀ ಅಬಾಸರ್ ಬ್ಯೂರಿಯಾ ಅವರ ನಿಧನಕ್ಕೆ ಪ್ರಧಾನಿ ಸಂತಾಪ

ಪ್ರಕಟಣಾ ದಿನಾಂಕ: 17 NOV 2022 9:57PM by PIB Bengaluru

ಭಾರತದ ಮಾಜಿ ರಾಜತಾಂತ್ರಿಕ ಶ್ರೀ ಅಬಾಸರ್ ಬ್ಯೂರಿಯಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.

"ಶ್ರೀ ಅಬಾಸರ್ ಬ್ಯೂರಿಯಾ ಅವರು ರಾಷ್ಟ್ರಕ್ಕೆ ನೀಡಿದ ಉತ್ಕೃಷ್ಟ ಸೇವೆಗಾಗಿ ಸ್ಮರಿಸಲ್ಪಡುತ್ತಾರೆ. ಅವರು ಒಡಿಯಾ ಭಾಷೆ ಮತ್ತು ಸಂಸ್ಕೃತಿಯ ಶ್ರೇಷ್ಠ ಪ್ರತಿಪಾದಕರಾಗಿಯೂ ಛಾಪು ಮೂಡಿಸಿದ್ದಾರೆ. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು. ಓಂ ಶಾಂತಿ" ಎಂದು ಪ್ರಧಾನಿಯವರು ಟ್ವೀಟ್‌ ನಲ್ಲಿ ಸಂತಾಪ ಸೂಚಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1877374) ವಿಸಿಟರ್ ಕೌಂಟರ್ : 156
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Manipuri , Bengali , Punjabi , Gujarati , Odia , Tamil , Telugu , Malayalam