ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಕಪ್‌ನಲ್ಲಿ ಕಂಚಿನ ಪದಕ  ಜಯಿಸಿದ್ದಕ್ಕಾಗಿ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

Posted On: 20 NOV 2022 10:05AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಏಷ್ಯನ್ ಕಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

"ಏಷ್ಯನ್ ಕಪ್‌ನಲ್ಲಿ ಭಾರತೀಯ ಟೇಬಲ್ ಟೆನಿಸ್‌ಗಾಗಿ ಕಂಚಿನ ಪದಕವನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಬರೆದಿದ್ದಕ್ಕಾಗಿ ನಾನು ಮಣಿಕಾ ಬಾತ್ರಾ ಅವರನ್ನು ಅಭಿನಂದಿಸುತ್ತೇನೆ. ಅವರ ಯಶಸ್ಸು ಭಾರತದಾದ್ಯಂತ ಅನೇಕ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ ಮತ್ತು ಟೇಬಲ್ ಟೆನಿಸ್ ಅನ್ನು ಮತ್ತಷ್ಟು ಜನಪ್ರಿಯಗೊಳಿಸುತ್ತದೆ. @manikabatra_TT"

******


(Release ID: 1877562) Visitor Counter : 155