ಪಶು ಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಸಚಿವಾಲಯ

'ಭಾರತದ ಶ್ವೇತ ಕ್ರಾಂತಿಯ ಪಿತಾಮಹ'ನ 101ನೇ ಜನ್ಮ ವಾರ್ಷಿಕೋತ್ಸವದ ಸ್ಮರಣಾರ್ಥ ಪಶುಸಂಗೋಪನಾ ಇಲಾಖೆಯಿಂದ ಬೆಂಗಳೂರಿನಲ್ಲಿ ರಾಷ್ಟ್ರೀಯ ಕ್ಷೀರ ದಿನ ಆಚರಣೆ 



ಕಾರ್ಯಕ್ರಮದ ಭಾಗವಾಗಿ ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿಗಳು 2022 ವಿತರಣೆ 

ಪ್ರಾಣಿಗಳ ಸಂಪರ್ಕತಡೆಯನ್ನು ಪ್ರಮಾಣೀಕರಿಸುವ ಸೇವೆ(Animal Quarantine Certification Services)ಉದ್ಘಾಟನೆ 

Posted On: 25 NOV 2022 1:47PM by PIB Bengaluru

'ಭಾರತದ ಶ್ವೇತ ಕ್ರಾಂತಿಯ ಪಿತಾಮಹ', ಕ್ಷೀರ ಕ್ರಾಂತಿಯ ಪಿತಾಮಹ ಎಂದು ಸಹ ಹೆಸರು ಗಳಿಸಿರುವ ಡಾ ವರ್ಗೀಸ್ ಕುರಿಯನ್ ಅವರ 101ನೇ ಜನ್ಮ ವಾರ್ಷಿಕೋತ್ಸವದ ಸ್ಮರಣಾರ್ಥ ಪಶುಸಂಗೋಪನಾ ಇಲಾಖೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಕ್ಷೀರ ದಿನ ಆಚರಿಸುತ್ತಿದೆ. ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ನಾಳೆ ಅಂದರೆ ನವೆಂಬರ್ 26ರಂದು ಬೆಂಗಳೂರಿನಲ್ಲಿ ಕ್ಷೀರ ದಿನವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರತಿಷ್ಠಿತ ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿ 2022ನ್ನು ಸಹ ವಿತರಿಸಲಾಗುವುದು. 

ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ, ಕರ್ನಾಟಕ ಸರ್ಕಾರದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ ಮತ್ತು ಕರ್ನಾಟಕ ಹಾಲು ಒಕ್ಕೂಟಗಳು ಬೆಂಗಳೂರಿನಲ್ಲಿ ಈ ಸ್ಮರಣೀಯ ರಾಷ್ಟ್ರೀಯ ಕಾರ್ಯಕ್ರಮವನ್ನು ಆಯೋಜಿಸಲು ಕೈಜೋಡಿಸಿವೆ.

ಭಾರತ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಡಾ. ಸಂಜೀವ್ ಕುಮಾರ್ ಬಲ್ಯಾನ್ ಅವರು ಬೆಂಗಳೂರಿನ ಹೆಸರಘಟ್ಟದಲ್ಲಿರುವ ಕೇಂದ್ರೀಯ ಜಾನುವಾರು ಸಾಕಣೆ ಕೇಂದ್ರದಲ್ಲಿ, ಕೇಂದ್ರ ಘನೀಕೃತ ವೀರ್ಯ ಉತ್ಪಾದನೆ ಮತ್ತು ತರಬೇತಿ ಸಂಸ್ಥೆಯಲ್ಲಿ ಸುಧಾರಿತ ತರಬೇತಿ ಸೌಲಭ್ಯದ ಕರ್ನಾಟಕ ಗೋವಿನ ಐವಿಎಫ್-(Invitro-fertilization) ಕೇಂದ್ರದ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. 

ಸಮಾರಂಭದಲ್ಲಿ ಕ್ಷೀರ ಪಿತಾಮಹ ವರ್ಗೀಸ್ ಕುರಿಯನ್ ಅವರ ಜೀವನ ಕುರಿತ ಪುಸ್ತಕ ಮತ್ತು ಹಾಲಿನ ಕಲಬೆರಕೆ ಕುರಿತ ಕಿರುಪುಸ್ತಕವನ್ನು ಗಣ್ಯರು ಬಿಡುಗಡೆ ಮಾಡಲಿದ್ದಾರೆ.

ಭಾರತ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವರಾದ ಡಾ. ಸಂಜೀವ್ ಕುಮಾರ್ ಬಲ್ಯಾನ್ ಅವರು ಮಾತ್ರವಲ್ಲದೆ, ಕರ್ನಾಟಕ ಸರ್ಕಾರದ ಪಶುಸಂಗೋಪನಾ ಸಚಿವ ಶ್ರೀ. ಪ್ರಭು ಬಿ. ಚೌಹಾಣ್, ಕೆಎಂಎಫ್ ಅಧ್ಯಕ್ಷ ಶ್ರೀ ಬಾಲಚಂದ್ರ ಎಲ್. ಜಾರಕಿಹೊಳಿ ಅವರು ಸಹ ಭಾಗವಹಿಸಲಿದ್ದಾರೆ. ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಒಕ್ಕೂಟದ ಕಾರ್ಯದರ್ಶಿ ಶ್ರೀ ರಾಜೇಶ್ ಕುಮಾರ್ ಸಿಂಗ್, ಜಾನುವಾರು ಮತ್ತು ಹೈನುಗಾರಿಕೆ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ವರ್ಷಾ ಜೋಶಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವರು, ಬೆಂಗಳೂರಿನ ಹೆಸರಘಟ್ಟದಲ್ಲಿ ನಡೆಯುವ ಕಾರ್ಯಕ್ರಮದ ಭಾಗವಾಗಿ ಪ್ರಾಣಿಗಳ ಸಂಪರ್ಕತಡೆಯನ್ನು ಪ್ರಮಾಣೀಕರಿಸುವ ಸೇವೆಗಳನ್ನು(AQCS) ಉದ್ಘಾಟಿಸಲಿದ್ದಾರೆ. AQCS ಜಾನುವಾರುಗಳು ಮತ್ತು ಅವುಗಳ ಉತ್ಪನ್ನಗಳ ಆಮದಿಗೆ ಆನ್‌ಲೈನ್ ಅನುಮತಿ ವ್ಯವಸ್ಥೆಯನ್ನು ಹೊಂದಿದ್ದು, ಸ್ಥಳೀಯ ಆರ್ಥಿಕ ವೃದ್ಧಿಗೆ ಬಹಳ ದೊಡ್ಡ ಶಕ್ತಿಯಾಗಿದೆ.

*****



(Release ID: 1878836) Visitor Counter : 513