ಹಣಕಾಸು ಸಚಿವಾಲಯ
ರಾಜ್ಯಗಳ ಹಣಕಾಸು ಸಚಿವರೊಂದಿಗೆ ಬಜೆಟ್ ಪೂರ್ವ ಸಮಾಲೋಚನಾ ಸಭೆ ಅಧ್ಯಕ್ಷತೆ ವಹಿಸಿದ್ದ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್
Posted On:
25 NOV 2022 5:39PM by PIB Bengaluru
ಕೇಂದ್ರ ಹಣಕಾಸು ಸಚಿವರು ಇಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ (ಶಾಸಕಾಂಗದೊಂದಿಗೆ) ಗಳ ಹಣಕಾಸು ಸಚಿವರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್, ಹಣಕಾಸು ಸಚಿವರು, ಸಚಿವರು ಮತ್ತು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ, ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರನ್ನು ಸ್ವಾಗತಿಸಿದರು ಮತ್ತು ಮುಂಬರುವ ಬಜೆಟ್ ಗಾಗಿ ಈ ನಿರ್ದಿಷ್ಟ ಸಮಾಲೋಚನೆಯ ಮಹತ್ವವನ್ನು ತಿಳಿಸಿದರು.
ಭಾಗವಹಿಸಿದ್ದವರಲ್ಲಿ ಹೆಚ್ಚಿನವರು ತಮ್ಮ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಸಾಲದ ಮಿತಿಯನ್ನು ಹೆಚ್ಚಿಸುವ, ಎರಡು ಸುಧಾರಿತ ಡೆವಲ್ಯೂಷನ್ ಕಂತುಗಳನ್ನು ಒದಗಿಸುವ ಮೂಲಕ ಮತ್ತು ಬಂಡವಾಳ ವೆಚ್ಚಕ್ಕಾಗಿ ವಿಶೇಷ ನೆರವಿನ ಮೂಲಕ ಆರ್ಥಿಕವಾಗಿ ಬೆಂಬಲಿಸಿದ್ದಕ್ಕಾಗಿ ಕೇಂದ್ರ ಹಣಕಾಸು ಸಚಿವರಿಗೆ ಧನ್ಯವಾದ ಅರ್ಪಿಸಿದರು. ಭಾಗವಹಿಸಿದ್ದವರು ಬಜೆಟ್ ಭಾಷಣದಲ್ಲಿ ಸೇರಿಸಲು ಕೇಂದ್ರ ಹಣಕಾಸು ಸಚಿವರಿಗೆ ಹಲವಾರು ಸಲಹೆಗಳನ್ನು ನೀಡಿದರು. 2023-24ನೇ ಸಾಲಿನ ಆಯವ್ಯಯದ ಬಗ್ಗೆ ನೀಡಿದ ಆಧಾನ ಮತ್ತು ಸಲಹೆಗಳಿಗಾಗಿ ಕೇಂದ್ರ ಹಣಕಾಸು ಸಚಿವರು ಭಾಗವಹಿಸಿದ್ದವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಪ್ರತಿಯೊಂದು ಪ್ರಸ್ತಾಪವನ್ನು ಪರಿಶೀಲಿಸುವ ಭರವಸೆ ನೀಡಿದರು.
*****
(Release ID: 1878979)
Visitor Counter : 126