ಪ್ರಧಾನ ಮಂತ್ರಿಯವರ ಕಛೇರಿ
“ಪರೀಕ್ಷಾ ಪೇ ಚರ್ಚಾ 2023” ಕಾರ್ಯಕ್ರಮಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಪ್ರಧಾನಮಂತ್ರಿಯವರಿಂದ ಆಹ್ವಾನ
Posted On:
30 NOV 2022 4:37PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು, ಅವರ ಪೋಷಕರು ಮತ್ತು ಶಿಕ್ಷಕರನ್ನು “ಪರೀಕ್ಷಾ ಪೇ ಚರ್ಚಾ 2023” ಕಾರ್ಯಕ್ರಮಕ್ಕೆ ಸಂಬಂಧಿಸಿದ ಆಸಕ್ತಿದಾಯಕ ಚಟುವಟಿಕೆಗಳಲ್ಲಿ ಭಾಗವಹಿಸಲು ಆಹ್ವಾನಿಸಿದ್ದಾರೆ. ನಮ್ಮ ವಿದ್ಯಾರ್ಥಿಗಳಿಗೆ ಒತ್ತಡ-ಮುಕ್ತ ವಾತಾವರಣವನ್ನು ನಿರ್ಮಿಸಲು ಸಾಮೂಹಿಕವಾಗಿ ಕೆಲಸ ಮಾಡುವ ಅಗತ್ಯವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು.
ಕೇಂದ್ರ ಶಿಕ್ಷಣ ಸಚಿವಾಲಯದ ಟ್ವೀಟ್ ಸಂದೇಶವನ್ನು ಉಲ್ಲೇಖಿಸಿ, ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ;
“ಪರೀಕ್ಷಾ ಪೇ ಚರ್ಚಾ 2023” ಕಾರ್ಯಕ್ರಮಕ್ಕೆ ಸಂಬಂಧಿಸಿದ ಈ ಆಸಕ್ತಿದಾಯಕ ಚಟುವಟಿಕೆಗಳಲ್ಲಿ ಭಾಗವಹಿಸಲು ನಾನು ಎಲ್ಲಾ ಪರೀಕ್ಷಾ ಯೋಧರು(ವಿದ್ಯಾರ್ಥಿಗಳು), ಅವರ ಪೋಷಕರು ಮತ್ತು ಶಿಕ್ಷಕರಿಗೆ ಆಹ್ವಾನಿಸುತ್ತಿದ್ಧೇನೆ. ನಮ್ಮ ವಿದ್ಯಾರ್ಥಿಗಳಿಗೆ ಒತ್ತಡ-ಮುಕ್ತ ವಾತಾವರಣವನ್ನು ನಿರ್ಮಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ. #ಪಿಪಿಸಿ2023 ( #PPC2023) "
*****
(Release ID: 1880031)
Visitor Counter : 164
Read this release in:
Telugu
,
Bengali
,
English
,
Gujarati
,
Urdu
,
Hindi
,
Marathi
,
Manipuri
,
Assamese
,
Punjabi
,
Odia
,
Tamil
,
Malayalam