ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಮಹಾಪರಿನಿರ್ವಾಣ ದಿನದಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

Posted On: 06 DEC 2022 9:44AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಹಾಪರಿನಿರ್ವಾಣ ದಿನದಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ ಮತ್ತು ನಮ್ಮ ರಾಷ್ಟ್ರಕ್ಕೆ ಅವರು ಸಲ್ಲಿಸಿದ ಅನುಕರಣೀಯ ಸೇವೆಯನ್ನು ಸ್ಮರಿಸಿದ್ದಾರೆ.

ಈ ಕುರಿತು ಪ್ರಧಾನಿ ಹೀಗೆ ಟ್ವೀಟ್‌ ಮಾಡಿದ್ದಾರೆ:

"ಮಹಾಪರಿನಿರ್ವಾಣ ದಿನದಂದು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಾನು ಗೌರವ ನಮನ ಸಲ್ಲಿಸುತ್ತೇನೆ ಮತ್ತು ನಮ್ಮ ದೇಶಕ್ಕೆ ಅವರ ಅನುಕರಣೀಯ ಸೇವೆಯನ್ನು ಸ್ಮರಿಸುತ್ತೇನೆ. ಅವರ ಹೋರಾಟಗಳು ಲಕ್ಷಾಂತರ ಜನರಿಗೆ ಭರವಸೆಯನ್ನು ನೀಡಿವೆ. ಭಾರತಕ್ಕೆ ಇಷ್ಟು ವಿಸ್ತಾರವಾದ ಸಂವಿಧಾನವನ್ನು ನೀಡುವ ಅವರ ಪ್ರಯತ್ನಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.”

*****(Release ID: 1881109) Visitor Counter : 183