ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾರಾಷ್ಟ್ರದ ನಾಗ್ಪುರ ಸಮೃದ್ಧಿ ಮಹಾಮಾರ್ಗವನ್ನು ಪ್ರಧಾನಿಗಳು ಉದ್ಘಾಟಿಸಿದರು

Posted On: 11 DEC 2022 2:48PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದುಮಹಾರಾಷ್ಟ್ರದ ನಾಗ್ಪುರದಲ್ಲಿ ಹಿಂದೂ ಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ್‌ನ  ಮೊದಲ ಹಂತವನ್ನಿಂದು  ಉದ್ಘಾಟಿಸಿದರು.ಈ ಮಾರ್ಗವು 520 ಕಿಲೋಮೀಟರ್ ದೂರವನ್ನು ಕ್ರಮಿಸುತ್ತಿದ್ದಯ, ನಾಗ್ಪುರ ಮತ್ತು ಶಿರಡಿಯನ್ನು ಸಂಪರ್ಕಿಸುವ ಮಾರ್ಗ ಇದಾಗಿದೆ.

 ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು ಹೀಗೆ:

"ಉತ್ತಮ ಗುಣಮಟ್ಟದ ಮೂಲಸೌಕರ್ಯವನ್ನು ತಲುಪಿಸಲು ನಾವು ಬದ್ಧರಾಗಿದ್ದೇವೆ. ನಾಗ್ಪುರ ಮತ್ತು ಶಿರಡಿ ನಡುವಿನ ಮಹಾಮಾರ್ಗ್  ಈ ಪ್ರಯತ್ನಕ್ಕೆ ಉದಾಹರಣೆಯಾಗಿದೆ.  ಈ ಆಧುನಿಕ ರಸ್ತೆ ಯೋಜನೆಯನ್ನು ಉದ್ಘಾಟಿಸಿ ಮಹಾಮಾರ್ಗದಲ್ಲಿ ಚಾಲನೆ ನೀಡಲಾಗಿದೆ.  ಇದು ಮಹಾರಾಷ್ಟ್ರದ ಮತ್ತಷ್ಟು ಆರ್ಥಿಕ ಪ್ರಗತಿಗೆ ಕೊಡುಗೆ ನೀಡುತ್ತದೆ ಎಂಬುದು ನನಗೆ ಖಾತ್ರಿಯಿದೆ.

ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅಭಿನಂದಿಸಲಾಯಿತು. ಈ ಕಾರ್ಯಕ್ರಮಕ್ಕೆ ಪ್ರಧಾನಿಗಳವರೊಂದಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ, ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಭಗತ್ ಸಿಂಗ್ ಕೊಶ್ಯಾರಿ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಮತ್ತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರುಗಳು ಆಗಮಿಸಿದರು.

 ಹಿನ್ನೆಲೆ: 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಂದೂ ಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ್‌ನ ಮೊದಲ ಹಂತವನ್ನು ಉದ್ಘಾಟಿಸಿದರು, ಇದು 520 ಕಿಮೀ ದೂರವನ್ನು ಕ್ರಮಿಸುತ್ತದೆ ಮತ್ತು ನಾಗ್ಪುರ ಮತ್ತು ಶಿರಡಿಯನ್ನು ಸಂಪರ್ಕಿಸುವ ರಸ್ತೆಯಾಗಿದೆ.

 ಸಮೃದ್ಧಿ ಮಹಾಮಾರ್ಗ್ ಅಥವಾ ನಾಗ್ಪುರ-ಮುಂಬೈ ಸೂಪರ್ ಕಮ್ಯುನಿಕೇಷನ್ ಎಕ್ಸ್‌ಪ್ರೆಸ್‌ವೇ ಯೋಜನೆಯು ದೇಶದಾದ್ಯಂತ ಸುಧಾರಿತ ಸಂಪರ್ಕ ಮತ್ತು ಮೂಲಸೌಕರ್ಯಗಳ ಪ್ರಧಾನಮಂತ್ರಿಯವರ ದೂರದೃಷ್ಟಿಯನ್ನು ಸಾಕಾರಗೊಳಿಸುವ ಪ್ರಮುಖ ಹೆಜ್ಜೆಯಾಗಿದೆ.  701 ಕಿಮೀ ಎಕ್ಸ್‌ಪ್ರೆಸ್‌ವೇ - ಸುಮಾರು 55,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ - ಇದು ಭಾರತದ ಅತಿ ಉದ್ದದ ಎಕ್ಸ್‌ಪ್ರೆಸ್‌ವೇಗಳಲ್ಲಿ ಒಂದಾಗಿದೆ. ಇದು ಮಹಾರಾಷ್ಟ್ರದ 10 ಜಿಲ್ಲೆಗಳು ಮತ್ತು ಅಮರಾವತಿ, ಔರಂಗಾಬಾದ್ ಮತ್ತು ನಾಸಿಕ್‌ನ ಪ್ರಮುಖ ನಗರ ಪ್ರದೇಶಗಳ ಮೂಲಕ ಹಾದುಹೋಗುತ್ತದೆ.  ಎಕ್ಸ್‌ಪ್ರೆಸ್‌ವೇ ಪಕ್ಕದ 14 ಜಿಲ್ಲೆಗಳ ಸಂಪರ್ಕವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೀಗಾಗಿ ವಿದರ್ಭ, ಮರಾಠವಾಡ ಮತ್ತು ಉತ್ತರ ಮಹಾರಾಷ್ಟ್ರ ಪ್ರದೇಶಗಳು ಸೇರಿದಂತೆ ರಾಜ್ಯದ ಸುಮಾರು 24 ಜಿಲ್ಲೆಗಳ ಅಭಿವೃದ್ಧಿಗೆ ಸಹಾಯ ಮಾಡುತ್ತದೆ.

 ಪ್ರಧಾನಮಂತ್ರಿ ಗತಿ ಶಕ್ತಿಯಡಿಯಲ್ಲಿ ಸಮಗ್ರ ಯೋಜನೆ ಮತ್ತು ಮೂಲಸೌಕರ್ಯ ಸಂಪರ್ಕ ಯೋಜನೆಗಳ ಸಮನ್ವಯ ಅನುಷ್ಠಾನದ ಪ್ರಧಾನಮಂತ್ರಿಯವರ ದೃಷ್ಟಿಯನ್ನು ಪ್ರತಿಪಾದಿಸುತ್ತಾ, ಸಮೃದ್ಧಿ ಮಹಾಮಾರ್ಗ್ ದೆಹಲಿ ಮುಂಬೈ ಎಕ್ಸ್‌ಪ್ರೆಸ್‌ವೇ, ಜವಾಹರಲಾಲ್ ನೆಹರು ಪೋರ್ಟ್ ಟ್ರಸ್ಟ್ ಮತ್ತು ಅಜಂತಾ ಎಲ್ಲೋರಾ ಗುಹೆಗಳು, ಶಿರಡಿ, ವೆರುಲ್, ಲೋನಾರ್ ಮುಂತಾದ ಪ್ರವಾಸಿ ಸ್ಥಳಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಈ ಸಮೃದ್ಧಿ ಮಹಾಮಾರ್ಗವು ಮಹಾರಾಷ್ಟ್ರದ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಉತ್ತೇಜನವನ್ನು ನೀಡುವಲ್ಲಿ ಬದಲಾವಣೆಯನ್ನು ತರುತ್ತದೆ.

*****


(Release ID: 1882537) Visitor Counter : 212