ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.

Posted On: 16 DEC 2022 4:09PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಎಸ್ ಸಿಒ ಶೃಂಗಸಭೆಯ ನೇಪಥ್ಯದಲ್ಲಿ ಸಮರ್ಕಂಡ್ ನಲ್ಲಿ ನಡೆದ ಸಭೆಯ ನಂತರ, ಇಂಧನ ಸಹಕಾರ, ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತಾ ಸಹಕಾರ ಮತ್ತು ಇತರ ಪ್ರಮುಖ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧದ ಹಲವಾರು ಅಂಶಗಳನ್ನು ಇಬ್ಬರೂ ನಾಯಕರು ಪರಿಶೀಲಿಸಿದರು.

ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ, ಮಾತುಕತೆ ಮತ್ತು ರಾಜತಾಂತ್ರಿಕತೆಯೇ ಮುಂದಿರುವ ಏಕೈಕ ಮಾರ್ಗ ಎಂದು ಪ್ರಧಾನಮಂತ್ರಿಯವರು ತಮ್ಮ ಕರೆಯನ್ನು ಪುನರುಚ್ಚರಿಸಿದರು.

ಪ್ರಧಾನಮಂತ್ರಿಯವರು ಅಧ್ಯಕ್ಷ ಪುಟಿನ್ ಅವರಿಗೆ ಜಿ-20 ಶೃಂಗಸಭೆಯಲ್ಲಿ ಭಾರತ ಮುಂದುವರಿಯುತ್ತಿರುವ ಬಗ್ಗೆ ವಿವರಿಸಿ, ಭಾರತದ ಪ್ರಮುಖ ಆದ್ಯತೆಗಳನ್ನು ಎತ್ತಿ ಹಿಡಿದರು. ಶಾಂಘೈ ಸಹಕಾರ ಸಂಘಟನೆಯ ಭಾರತದ ಅಧ್ಯಕ್ಷತೆಯ ಹಿನ್ನೆಲೆಯಲ್ಲಿ ಎರಡೂ ದೇಶಗಳು ಒಟ್ಟಾಗಿ ಕೆಲಸ ಮಾಡುವ ನಿರೀಕ್ಷೆಯಲ್ಲಿದ್ದಾರೆ.

ನಾಯಕರು ಪರಸ್ಪರ ನಿಯಮಿತ ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದಾರೆ.

*****



(Release ID: 1884174) Visitor Counter : 109