ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜಸ್ಥಾನದ ಜೋಧ್ಪುರದಲ್ಲಿ ಸಂಭವಿಸಿದ ಅಡುಗೆ ಅನಿಲ ಸಿಲಿಂಡರ್ ದುರಂತದಲ್ಲಿ ಮೃತಪಟ್ಟವರಿಗೆ ಪಿಎಂಎನ್ಆರ್ಎಫ್ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

प्रविष्टि तिथि: 16 DEC 2022 6:11PM by PIB Bengaluru

ರಾಜಸ್ಥಾನದ ಜೋಧಪುರದಲ್ಲಿ ಸಂಭವಿಸಿದ ಅಡುಗೆ ಅನಿಲ  ಸಿಲಿಂಡರ್ ದುರಂತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಪಿಎಂಎನ್ಆರ್ಎಫ್ನಿಂದ ಈ ಪರಿಹಾರವನ್ನು ಘೋಷಿಸಲಾಗಿದೆ.

ಈ ಸಂಬಂಧ ಪ್ರಧಾನಮಂತ್ರಿ ಸಚಿವಾಲಯದಿಂದ ಟ್ವೀಟ್ ಮೂಲಕ ಸಂದೇಶ ನೀಡಲಾಗಿದೆ.

“ರಾಜಸ್ಥಾನದ ಜೋಧ್ಪುರದಲ್ಲಿ ಸಂಭವಿಸಿದ ಅಡುಗೆ ಅನಿಲ ಸಿಲಿಂಡರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ  2 ಲಕ್ಷ ರೂಪಾಯಿಗಳನ್ನು ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಘೋಷಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ಆರ್ಎಫ್) ಮೂಲಕ ಈ ಪರಿಹಾರ ಘೋಷಿಸಲಾಗಿದೆ”

*****


(रिलीज़ आईडी: 1884477) आगंतुक पटल : 126
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam