ಪ್ರಧಾನ ಮಂತ್ರಿಯವರ ಕಛೇರಿ

ಅಂಧರ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ

Posted On: 17 DEC 2022 7:57PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂಧರ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡವನ್ನು ಅಭಿನಂದಿಸಿದ್ದಾರೆ.

ವಿಕಲಚೇತನರ ಕ್ರಿಕೆಟ್ ಕೌನ್ಸಿಲ್ ಆಫ್ ಇಂಡಿಯಾದ ಟ್ವೀಟ್ ಅನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ ಅವರು, 

"ನಮ್ಮ ಕ್ರೀಡಾಪಟುಗಳ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ. ನಾವು ಅಂಧರ ಟಿ-20 ವಿಶ್ವಕಪ್ ಗೆದ್ದಿರುವುದಕ್ಕೆ ಸಂತೋಷವಾಗಿದೆ. ನಮ್ಮ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಭವಿಷ್ಯದ ಪ್ರಯತ್ನಗಳಿಗಾಗಿ ಅವರಿಗೆ ಶುಭ ಹಾರೈಕೆಗಳು," ಎಂದು ಟ್ವೀಟ್ ಮಾಡಿದ್ದಾರೆ.

*****

 



(Release ID: 1884500) Visitor Counter : 111