ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಫಿಫಾ ವಿಶ್ವಕಪ್ ಚಾಂಪಿಯನ್ ಆದ ಅರ್ಜೆಂಟೀನಾವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು


ಫಿಫಾ ವಿಶ್ವಕಪ್ ನಲ್ಲಿ ಉತ್ಸಾಹಭರಿತ ಪ್ರದರ್ಶನಕ್ಕಾಗಿ ಫ್ರಾನ್ಸ್ ದೇಶವನ್ನು ಕೂಡಾ ಅಭಿನಂದಿಸಿದರು

प्रविष्टि तिथि: 18 DEC 2022 11:55PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಫಿಪಾ ವಿಶ್ವಕಪ್ ಚಾಂಪಿಯನ್ ಆದ ಅರ್ಜೆಂಟೀನಾವನ್ನು ಅಭಿನಂದಿಸಿದರು. ಫಿಫಾ ವಿಶ್ವಕಪ್ನಲ್ಲಿ ಉತ್ಸಾಹಭರಿತ ಪ್ರದರ್ಶನಕ್ಕಾಗಿ ಫ್ರಾನ್ಸ್ ದೇಶವನ್ನೂ ಶ್ರೀ ಮೋದಿ ಅಭಿನಂದಿಸಿದರು.

ಪ್ರಧಾನಮಂತ್ರಿ ಹೀಗೆ ಟ್ವೀಟ್ ಮಾಡಿದ್ದಾರೆ;

" ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿ ಇದು ನೆನಪಿನಲ್ಲಿ ಉಳಿಯುತ್ತದೆ! #FIFAWorldCup ಚಾಂಪಿಯನ್ ಆದ ಅರ್ಜೆಂಟೀನಾಗೆ ಅಭಿನಂದನೆಗಳು! ಅವರು ಪಂದ್ಯಾವಳಿಯ ಉದ್ದಕ್ಕೂ ಅದ್ಭುತವಾಗಿ ಆಡಿದ್ದಾರೆ. ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳು ಭವ್ಯವಾದ ವಿಜಯದಲ್ಲಿ ಸಂಭ್ರಮಿಸುತ್ತಾರೆ! @alferdez "

 

"#FIFAWorldCup ನಲ್ಲಿ ಉತ್ಸಾಹಭರಿತ ಪ್ರದರ್ಶನಕ್ಕಾಗಿ ಫ್ರಾನ್ಸ್ಗೆ ಅಭಿನಂದನೆಗಳು! ಅವರು ಫೈನಲ್ಗೆ ತಲುಪುವ ಹಾದಿಯಲ್ಲಿ ತಮ್ಮ ಕೌಶಲ್ಯ ಮತ್ತು ಕ್ರೀಡಾ ಮನೋಭಾವದಿಂದ ಫುಟ್ಬಾಲ್ ಅಭಿಮಾನಿಗಳನ್ನು ಸಂತೋಷಪಡಿಸಿದರು. @EmanuelMacron"

******


(रिलीज़ आईडी: 1884765) आगंतुक पटल : 166
इस विज्ञप्ति को इन भाषाओं में पढ़ें: Urdu , English , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam