ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಣಿಪುರದ ನೋನಿ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ಸಂತಾಪ


ಪಿ ಎಂ ಎನ್‌ ಆರ್‌ ಎಫ್‌ ನಿಂದ ಪರಿಹಾರ ಘೋಷಣೆ

Posted On: 21 DEC 2022 8:52PM by PIB Bengaluru

ಮಣಿಪುರದ ನೋನಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಬಸ್ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ  2 ಲಕ್ಷರೂ. ಮತ್ತು ಗಾಯಗೊಂಡವರಿಗೆ 50,000 ರೂ.ಪರಿಹಾರವನ್ನು ಅವರು ಘೋಷಿಸಿದ್ದಾರೆ.

ಈ ಕುರಿತು ಪ್ರಧಾನ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ;

"ಮಣಿಪುರದ ನೋನಿ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ತೀವ್ರ ದುಃಖವಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ. ಮಣಿಪುರ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ: ಪ್ರಧಾನಿ @narendramodi"

"ಬಸ್ ಅಪಘಾತದಲ್ಲಿ ಮೃತಪಟ್ಟವರ ನಿಕಟ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್ ನಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಿ @narendramodi"

*****


(Release ID: 1885622) Visitor Counter : 127