ಪ್ರಧಾನ ಮಂತ್ರಿಯವರ ಕಛೇರಿ
ಹೆಸರಾಂತ ಗಮಕ ಪ್ರತಿಪಾದಕ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಚ್.ಆರ್.ಕೇಶವ ಮೂರ್ತಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
21 DEC 2022 11:05PM by PIB Bengaluru
ಖ್ಯಾತ ಗಮಕ ಪ್ರತಿಪಾದಕ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಎಚ್.ಆರ್.ಕೇಶವ ಮೂರ್ತಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನ ಮಂತ್ರಿಗಳು ತಮ್ಮ ಟ್ವೀಟ್ ನಲ್ಲಿ,
ಗಮಕವನ್ನು ಜನಪ್ರಿಯಗೊಳಿಸಲು ಮತ್ತು ಕರ್ನಾಟಕದ ವಿಶಿಷ್ಟ ಸಂಸ್ಕೃತಿಯನ್ನು ಬೆಳಗಲು ಶ್ರಮಿಸಿದ ಶ್ರೀ ಎಚ್.ಆರ್. ಕೇಶವ ಮೂರ್ತಿ ಅವರನ್ನು ನಾವು ಯಾವಾಗಲೂ ಸ್ಮರಿಸುತ್ತೇವೆ. ಅನೇಕ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಮಾರ್ಗದರ್ಶನ ನೀಡಿದ ಅವರು ಸ್ಮರಣೀಯರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
*******
(रिलीज़ आईडी: 1885630)
आगंतुक पटल : 169
इस विज्ञप्ति को इन भाषाओं में पढ़ें:
Bengali
,
English
,
Urdu
,
हिन्दी
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam