ಪ್ರಧಾನ ಮಂತ್ರಿಯವರ ಕಛೇರಿ
ಬಿಹಾರದ ಮೋತಿಹಾರಿಯಲ್ಲಿ ಇಟ್ಟಿಗೆ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಪ್ರಾಣಹಾನಿಗೆ ಪ್ರಧಾನಮಂತ್ರಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ
ಪಿಎಂಎನ್‌ಆರ್‌ಎಫ್ ನಿಂದ ಪರಿಹಾರ ಘೋಷಣೆ
Posted On:
24 DEC 2022 9:47AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಬಿಹಾರದ ಮೋತಿಹಾರಿಯಲ್ಲಿರುವ ಇಟ್ಟಿಗೆ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಪ್ರಾಣಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿಯವರು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಅಪಘಾತದಲ್ಲಿ ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದರು.
ಪ್ರಧಾನಮಂತ್ರಿಯವರ ಕಾರ್ಯಾಲಯದ ಟ್ವೀಟ್;
“ಮೋತಿಹಾರಿಯ ಇಟ್ಟಿಗೆ ಭಟ್ಟಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಯಾಗಿರುವುದು ದುಃಖ ತಂದಿದೆ.. ಗಾಯಗೊಂಡವರಿಗೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಪ್ರತಿ ಮೃತರ ಕುಟುಂಬದವರಿಗೆ ಪಿಎಂಎನ್‌ಆರ್‌ಎಫ್ ನಿಧಿಯಿಂದ ಎರಡು ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ನೀಡಲಾಗುತ್ತದೆ. ಗಾಯಗೊಂಡವರಿಗೆ ರೂ 50,000 ನೀಡಲಾಗುವುದು: ಪ್ರಧಾನಮಂತ್ರಿ @narendramodi
******
(Release ID: 1886363)
Visitor Counter : 168
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam