ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಭದ್ರತಾ ಪರಿಸ್ಥಿತಿ ಮತ್ತು ಅಭಿವೃದ್ಧಿ ಅಂಶಗಳ ಕುರಿತು ಪರಿಶೀಲನಾ ಸಭೆ ನಡೆಸಿದರು.

Posted On: 28 DEC 2022 8:27PM by PIB Bengaluru

ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಭದ್ರತಾ ಪರಿಸ್ಥಿತಿ ಮತ್ತು ಅಭಿವೃದ್ಧಿ ಅಂಶಗಳ ಕುರಿತು ಪರಿಶೀಲನಾ ಸಭೆ ನಡೆಸಿದರು.  ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್, ಶ್ರೀ ಮನೋಜ್ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ, ನಿರ್ದೇಶಕ (IB), ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ,(RAW)  ಮುಖ್ಯಸ್ಥ ಮತ್ತು ಜಮ್ಮು ಮತ್ತು ಕಾಶ್ಮೀರದ ಯುಟಿ ಅಧಿಕಾರಿಗಳು ಸೇರಿದಂತೆ ಭಾರತ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಶ್ರೀ ಅಮಿತ್ ಶಾ ಅವರು ಭದ್ರತಾ ಗ್ರಿಡ್‌ನ ಕಾರ್ಯನಿರ್ವಹಣೆಯನ್ನು ಮತ್ತು ಭದ್ರತೆಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪರಿಶೀಲಿಸಿದರು ಮತ್ತು ಭಯೋತ್ಪಾದನೆಯ ವಿರುದ್ಧ ಅಸಹಿಷ್ಣುತಾ ನೀತಿಯನ್ನು ಅನುಸರಿಸಲು ಅಗತ್ಯ ನಿರ್ದೇಶನಗಳನ್ನು ನೀಡಿದರು.

ಕೇಂದ್ರ ಗೃಹ ಸಚಿವರು ಜಮ್ಮು ಮತ್ತು ಕಾಶ್ಮೀರದ ಯುಟಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದರು ಮತ್ತು ಯೋಜನೆಗಳನ್ನು ಸಕಾಲಿಕವಾಗಿ ಪೂರ್ಣಗೊಳಿಸಲು ಒತ್ತು ನೀಡಿದರು.  ವಿವಿಧ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ 100 ರಷ್ಟು ಸಂತೃಪ್ತಿ ಸಾಧಿಸಲು ಮತ್ತು ಅಭಿವೃದ್ಧಿಯ ಪ್ರಯೋಜನಗಳು ಸಮಾಜದ ಪ್ರತಿಯೊಂದು ವರ್ಗವನ್ನು ತಲುಪುವಂತೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ತಮ್ಮ ಕೈಲಾದಷ್ಟು ಶ್ರಮಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾಮಾನ್ಯ ಜನರ ಯೋಗಕ್ಷೇಮವನ್ನು ಹಾಳುಮಾಡುವ ಭಯೋತ್ಪಾದಕ-ಪ್ರತ್ಯೇಕತಾವಾದಿ ಅಭಿಯಾನಕ್ಕೆ ನೆರವು ನೀಡಿ ,‌ಪ್ರೋತ್ಸಾಹಿಸಬೇಕು. ಅಲ್ಲದೇ ಜನರ ಯೋಗಕ್ಷೇಮಕ್ಕೆ  ಬೆಂಬಲ ನೀಡಬೇಕು. ಜನರಿಗೆ ಅಹಿತಕಾರಿ ಎನಿಸುವ ಹಿತಕರವಲ್ಲದ ಅಂಶಗಳನ್ನು ಒಳಗೊಂಡಿರುವ ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಕಿತ್ತುಹಾಕುವ ಅಗತ್ಯವಿದೆ.ಇದಕ್ಕಾಗಿ ಒತ್ತು ನೀಡಬೇಕು ಎಂದು ಕೇಂದ್ರ ಗೃಹ ಸಚಿವರು ಕರೆ ನೀಡಿದರು.

*****


(Release ID: 1887166) Visitor Counter : 145