ಪ್ರಧಾನ ಮಂತ್ರಿಯವರ ಕಛೇರಿ
ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಂಭವಿಸಿದ ಅವಘಡದಿಂದಾದ ಪ್ರಾಣಹಾನಿಗಳಿಗೆ ಪ್ರಧಾನಮಂತ್ರಿಯವರು ಸಂತಾಪ ಸೂಚಿಸಿದರು
ಪಿಎಂಎನ್‌ಆರ್‌ಎಫ್ ನಿಧಿಯಿಂದ ಪರಿಹಾರ ಧನ ಘೋಷಣೆ
Posted On:
29 DEC 2022 10:00AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಸಂಭವಿಸಿದ ಅವಘಡದಿಂದಾದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿಯವರು ಅವಘಡದಲ್ಲಿ ಮೃತರಾದ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿಯವರ ಕಚೇರಿಯ ಟ್ವೀಟ್ ಹೀಗಿದೆ:
"ಎಪಿಯ ನೆಲ್ಲೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ನಡೆದ ದುರ್ಘಟನೆಯಿಂದ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್ ನಿಧಿಯಿಂದ 2 ಲಕ್ಷ ರೂಪಾಯಿಗಳ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ನೀಡಲಾಗುವುದು: ಪ್ರಧಾನಮಂತ್ರಿ ನರೇಂದ್ರ ಮೋದಿ
*****
(Release ID: 1887278)
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam