ಪ್ರಧಾನ ಮಂತ್ರಿಯವರ ಕಛೇರಿ

ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ (ಇಂಡ್-ಆಸ್ ಇಸಿಟಿಎ) ಜಾರಿಗೆ ಬಂದಿರುವುದಕ್ಕೆ ಪ್ರಧಾನಮಂತ್ರಿಯವರು ಸಂತಸ ವ್ಯಕ್ತಪಡಿಸಿದ್ದಾರೆ

Posted On: 29 DEC 2022 6:31PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತ-ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ (ಇಂಡ್-ಆಸ್ ಇಸಿಟಿಎ) (IndAus ECTA) ಜಾರಿಗೆ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ 'ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ'ಗೆ ಇದು ಐತಿಹಾಸಿಕ ಕ್ಷಣವಾಗಿದೆ ಎಂದು ಶ್ರೀ ಮೋದಿ ಹೇಳಿದರು.

ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಟ್ವೀಟ್ಗೆ ಪ್ರತಿಕ್ರಿಯೆಯಾಗಿ, ಪ್ರಧಾನಮಂತ್ರಿ  ಮೋದಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

"IndAus ECTA ಇಂದು ಜಾರಿಗೆ ಬರುತ್ತಿರುವುದಕ್ಕೆ ಸಂತೋಷವಾಗಿದೆ. ಇದು ನಮ್ಮ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವಕ್ಕೆ ಒಂದು ಐತಿಹಾಸಿಕ ಕ್ಷಣವಾಗಿದೆ. ಇದು ನಮ್ಮ ವ್ಯಾಪಾರ ಮತ್ತು ಆರ್ಥಿಕ ಸಂಬಂಧಗಳ ಅಗಾಧ ಸಾಮರ್ಥ್ಯವನ್ನು ತೆರೆಯುತ್ತದೆ ಮತ್ತು ಎರಡೂ ಕಡೆಗಳಲ್ಲಿ ವ್ಯವಹಾರಗಳನ್ನು ಉತ್ತೇಜಿಸುತ್ತದೆ. ಶೀಘ್ರದಲ್ಲೇ ನಿಮ್ಮನ್ನು ಭಾರತದಲ್ಲಿ ಸ್ವಾಗತಿಸಲು ಎದುರುನೋಡುತ್ತಿದ್ದೇನೆ. @AlboMP"

********



(Release ID: 1887468) Visitor Counter : 113