ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ
ಶ್ರೀ ಧರ್ಮೇಂದ್ರ ಪ್ರಧಾನ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
प्रविष्टि तिथि:
30 DEC 2022 12:44PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ತಾಯಿ, ಹೀರಾಬೆನ್ ಅವರ ನಿಧನಕ್ಕೆ ಕೇಂದ್ರ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಶ್ರೀ ಪ್ರಧಾನ್, "ತಾಯಿಯಂತೆ ಯಾರೂ ಇಲ್ಲ" ಎಂದು ಹೇಳಿದ್ದಾರೆ.
ತಪಸ್ವಿ ಮತ್ತು ಕರ್ಮಯೋಗಿ ತಾಯಿ ಹೀರಾ ಬಾ ಅವರಿಗೆ ಗೌರವ ನಮನ ಸಲ್ಲಿಸಿದ ಶ್ರೀ ಪ್ರಧಾನ್, ಈ ದುಃಖದ ಸಮಯದಲ್ಲಿ, ಇಡೀ ದೇಶವು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ನಿಲ್ಲುತ್ತದೆ ಎಂದು ಹೇಳಿದರು.
*****
(रिलीज़ आईडी: 1887508)
आगंतुक पटल : 180