ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಗುಜರಾತ್‌ನ ನವಸಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತ ಜೀವಹಾನಿಗೆ ಪ್ರಧಾನಿ ಸಂತಾಪ 


ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಸಂತ್ರಸ್ತರಿಗೆ ಪರಿಹಾರ ಪ್ರಕಟ

ಪ್ರಕಟಣಾ ದಿನಾಂಕ: 31 DEC 2022 10:37AM by PIB Bengaluru

ಗುಜರಾತ್‌ನ ನವಸಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆಗಿರುವ ಜೀವಹಾನಿಗೆ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗುಜರಾತ್‌ನ ನವಸಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದ ಸಂತ್ರಸ್ತರಿಗೆ ಶ್ರೀ ಮೋದಿ ಅವರು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರ ಪ್ರಕಟಿಸಿದ್ದಾರೆ.

ಪ್ರಧಾನ ಮಂತ್ರಿಗಳ ಕಾರ್ಯಾಲಯ ಈ ಕುರಿತು ಟ್ವೀಟ್ ಮಾಡಿದ್ದು;

“ನವಸಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವ ಹಾನಿಗೆ ಅತೀವ ನೋವುಂಟಾಗಿದೆ. ಮೃತರ ಕುಟುಂಬದ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಂಭೀರ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು” ಎಂದು ಪ್ರಧಾನಿ ಪ್ರಕಟಿಸಿದ್ದಾರೆ.

****


(ಪ್ರಕಟಣೆ ಐ.ಡಿ.: 1887976) ವಿಸಿಟರ್ ಕೌಂಟರ್ : 180