ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಸಿದ್ದೇಶ್ವರ ಸ್ವಾಮಿಗಳ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
02 JAN 2023 11:59PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸಿದ್ದೇಶ್ವರ ಸ್ವಾಮಿಗಳ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು ಸಮಾಜಕ್ಕೆ ಸಲ್ಲಿಸಿದ ಅಸಾಧಾರಣ ಸೇವೆಗಾಗಿ ಅವರನ್ನು ಸ್ಮರಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,
“ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು ಸಮಾಜಕ್ಕೆ ಸಲ್ಲಿಸಿದ ಅಸಾಧಾರಣ ಸೇವೆಗಾಗಿ ಅವರನ್ನು ಸ್ಮರಿಸಲಾಗುವುದು. ಇತರರ ಒಳಿತಿಗಾಗಿ ಅವರು ದಣಿವರಿಯದೆ ದುಡಿದರು ಮತ್ತು ಅವರ ವಿದ್ವತ್ಪೂರ್ಣ ಹುರುಪಿನಿಂದ ಗೌರವಿಸಲ್ಪಟ್ಟಿದ್ದಾರೆ. ಈ ದುಃಖದ ಸಮಯದಲ್ಲಿ, ನನ್ನ ಸಂವೇದನೆ ಅವರ ಅಸಂಖ್ಯಾತ ಭಕ್ತರೊಂದಿಗೆ ಇದೆ. ಓಂ ಶಾಂತಿ." ಎಂದು ಹೇಳಿದ್ದಾರೆ.
*****
(Release ID: 1888216)
Visitor Counter : 207
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam