ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ
ಜನವರಿ 9, 2023 ರಂದು ಭಾರತದ 242 ಜಿಲ್ಲೆಗಳಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳವನ್ನು ನಡೆಸಲಾಗುವುದು
Posted On:
06 JAN 2023 2:14PM by PIB Bengaluru
ಮುಖ್ಯಾಂಶಗಳು:
* ಮೇಳದಲ್ಲಿ ಪಾಲ್ಗೊಳ್ಳಲು ಸ್ಥಳೀಯ ವ್ಯಾಪಾರಿಗಳು ಮತ್ತು ಸಂಸ್ಥೆಗಳನ್ನು ಆಹ್ವಾನಿಸಲಾಗಿದೆ ಮತ್ತು ಭಾರತದ ಯುವಜನತೆಗೆ ಶಿಷ್ಯವೃತ್ತಿ ಅವಕಾಶಗಳನ್ನು ಒದಗಿಸಲು ಕೋರಲಾಗಿದೆ
* https://www.apprenticeshipindia.gov.in/ ಗೆ ಭೇಟಿ ನೀಡುವ ಮೂಲಕ ಮೇಳದಲ್ಲಿ ಭಾಗವಹಿಸಲು ವೈಯಕ್ತಿಕವಾಗಿ ನೋಂದಾಯಿಸಿಕೊಳ್ಳಬಹುದು ಮತ್ತು ಮೇಳ ನಡೆಯುತ್ತಿರುವ ಹತ್ತಿರದ ಸ್ಥಳವನ್ನು ಹುಡುಕಬಹುದು
ಸ್ಕಿಲ್ ಇಂಡಿಯಾ ಮಿಷನ್ ಅಡಿಯಲ್ಲಿ ಭಾರತದ ಯುವಕರಿಗೆ ವೃತ್ತಿ ಅವಕಾಶಗಳನ್ನು ಹೆಚ್ಚಿಸುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೃಷ್ಟಿಕೋನದ ಭಾಗವಾಗಿ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ (MSDE) ಜನವರಿ 9, 2023 ರಂದು ಭಾರತದ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 242 ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಮೇಳವನ್ನು (PMNAM) ಆಯೋಜಿಸುತ್ತಿದೆ.
ಶಿಷ್ಯವೃತ್ತಿ ತರಬೇತಿಯ ಮೂಲಕ ಸ್ಥಳೀಯ ಯುವಕರಿಗೆ ತಮ್ಮ ವೃತ್ತಿಜೀವನವನ್ನು ರೂಪಿಸಲು ಸೂಕ್ತವಾದ ಅವಕಾಶಗಳನ್ನು ಒದಗಿಸಲು ಹಲವಾರು ಸ್ಥಳೀಯ ವ್ಯಾಪಾರಗಳು ಮತ್ತು ಸಂಸ್ಥೆಗಳನ್ನು ಈ ಅಪ್ರೆಂಟಿಸ್‌ಶಿಪ್ ಮೇಳದಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮ ವಿವಿಧ ವಲಯಗಳನ್ನು ಪ್ರತಿನಿಧಿಸುವ ಅನೇಕ ಕಂಪನಿಗಳ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ. ಭಾಗವಹಿಸುವ ಸಂಸ್ಥೆಗಳು ಒಂದೇ ವೇದಿಕೆಯಲ್ಲಿ ಜೀವನೋಪಾಯವನ್ನು ಬಲಪಡಿಸಲು ಮತ್ತು ಹೊಸ ಕೌಶಲ್ಯಗಳನ್ನು ಕಲಿಕೆಗೆ ಅವಕಾಶವನ್ನು ಒದಗಿಸಲು ಸಂಭಾವ್ಯ ಶಿಷ್ಯವೃತ್ತಿ ಅಸಕ್ತರನ್ನು ಭೇಟಿ ಮಾಡಲು ಮತ್ತು ಸ್ಥಳದಲ್ಲೇ ಅರ್ಜಿದಾರರನ್ನು ಆಯ್ಕೆ ಮಾಡಲು ಅವಕಾಶವನ್ನು ಹೊಂದಿರುತ್ತವೆ,
https://www.apprenticeshipindia.gov.in/ ಗೆ ಭೇಟಿ ನೀಡುವ ಮೂಲಕ ವೈಯಕ್ತಿಕವಾಗಿ ಹತ್ತಿರದ ಮೇಳದ ಸ್ಥಳವನ್ನು ಹುಡುಕುವ ಮೂಲಕ ಮೇಳಕ್ಕೆ ನೋಂದಾಯಿಸಿಕೊಳ್ಳಬಹುದು. 5 ನೇ ತರಗತಿಯಿಂದ 12 ನೇ ತರಗತಿಯವರೆಗೆ ಓದಿರುವವರು ಮತ್ತು ಕೌಶಲ್ಯ ತರಬೇತಿ ಪ್ರಮಾಣಪತ್ರಗಳನ್ನು ಹೊಂದಿರುವ ಅಭ್ಯರ್ಥಿಗಳು ಅಥವಾ ITI ಡಿಪ್ಲೋಮಾ ಹೊಂದಿರುವವರು ಅಥವಾ ಪದವೀಧರರು ಈ ಅಪ್ರೆಂಟಿಸ್‌ಶಿಪ್ ಮೇಳದಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ಸ್ವವಿವರದ ಮೂರು ಪ್ರತಿಗಳು, ಎಲ್ಲ ಅಂಕಪಟ್ಟಿ ಮತ್ತು ಪ್ರಮಾಣಪತ್ರಗಳ ಮೂರು ಪ್ರತಿಗಳು, ಫೋಟೋ ಐಡಿ (ಆಧಾರ್ ಕಾರ್ಡ್ / ಡ್ರೈವಿಂಗ್ ಲೈಸೆನ್ಸ್ ಇತ್ಯಾದಿ) ಮತ್ತು ಮೂರು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಜೊತೆಗೆ ಕೊಂಡೊಯ್ಯಬೇಕು. ಈಗಾಗಲೇ ದಾಖಲಾದವರು ಎಲ್ಲ ಸಂಬಂಧಿತ ದಾಖಲೆಗಳೊಂದಿಗೆ ಸ್ಥಳಕ್ಕೆ ತಲುಪಲು ವಿನಂತಿಸಲಾಗಿದೆ. ಈ ಮೇಳದ ಮೂಲಕ, ಅಭ್ಯರ್ಥಿಗಳು ನ್ಯಾಶನಲ್ ಕೌನ್ಸಿಲ್ ಫಾರ್ ವೊಕೇಶನಲ್ ಎಜುಕೇಶನ್ ಅಂಡ್ ಟ್ರೈನಿಂಗ್ (NCVET) ಮಾನ್ಯತೆ ಪಡೆದ ಪ್ರಮಾಣ ಪತ್ರವನ್ನು ಸಹ ಗಳಿಸುತ್ತಾರೆ ಮತ್ತು ತರಬೇತಿ ಅವಧಿಯ ನಂತರ ತಮ್ಮ ಉದ್ಯೋಗದ ಅವಕಾಶಗಳ ಸಾಧ್ಯತೆಯನ್ನು ಹೆಚ್ಚಿಸಿಕೊಳ್ಳುತ್ತಾರೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಷ್ಯವೇತನ ಮೇಳದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಕಾರ್ಯದರ್ಶಿ ಶ್ರೀ ಅತುಲ್ ಕುಮಾರ್ ತಿವಾರಿ, ಕೌಶಲ್ಯ ಮತ್ತು ಜ್ಞಾನವು ದೇಶದ ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ಅಭಿವೃದ್ಧಿಯ ಪ್ರೇರಕ ಶಕ್ತಿಗಳಾಗಿವೆ ಎಂದು ಹೇಳಿದರು. ಹೊಸ ಪ್ರಪಂಚ ಒಡ್ಡಿದಂತಹ ಸವಾಲುಗಳು ಮತ್ತು ಅವಕಾಶಗಳಿಗೆ ಉನ್ನತ ಮಟ್ಟದ ಮತ್ತು ಉತ್ತಮ ಕೌಶಲ್ಯಗಳನ್ನು ಹೊಂದಿರುವ ದೇಶಗಳು ಹೆಚ್ಚು ಪರಿಣಾಮಕಾರಿಯಾಗಿ ಹೊಂದಿಕೊಳ್ಳುತ್ತವೆ ಎಂಬುದು ಸಾಬೀತಾಗಿದೆ. ನಮ್ಮ ಶಿಷ್ಯವೃತ್ತಿ ಕಾರ್ಯಕ್ರಮಗಳ ಮೂಲಕ ನಾವು ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಮತ್ತು ಭಾರತದ ಆರ್ಥಿಕ ಎಂಜಿನ್ ಅನ್ನು ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿರುವ ಸ್ವತಃ ಸಮರ್ಥ ಕಾರ್ಯಪಡೆಯನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಅವರು ಹೇಳಿದರು.
ಪಿಎಂಎನ್‌ಎಎಂ ಅಪ್ರೆಂಟಿಸ್‌ಶಿಪ್ ಆಕಾಂಕ್ಷಿಗಳು ಮತ್ತು ಉದ್ಯೋಗದಾತರ ಭೇಟಿಯನ್ನು ತ್ವರಿತವಾಗಿ ಕಾರ್ಯರೂಪಕ್ಕೆ ತರುವ ವೇದಿಕೆಯಾಗಿದೆ ಮತ್ತು ಉದ್ಯೋಗದಾತರೊಂದಿಗೆ ಆಕಾಂಕ್ಷಿಗಳು ಸಂವಹನ ನಡೆಸಲು ಮತ್ತು ಅವರು ತರಬೇತಿ ನೀಡಲು ಬಯಸುವ ಉದ್ಯಮದ ಬಗ್ಗೆ ತಿಳಿದುಕೊಳ್ಳಲು, ತಮ್ಮ ವೃತ್ತಿ ಜೀವನವನ್ನು ರೂಪಿಸಿಕೊಳ್ಳು ಅವಕಾಶವನ್ನು ಒದಗಿಸುತ್ತದೆ ಎಂದು ಅವರು ಹೇಳಿದರು. ಈ ಮೇಳಗಳು ಸರಿಯಾದ ಅವಕಾಶಗಳನ್ನು ಹುಡುಕುವ ಹೊಸಬರಿಗೆ ಹೆಚ್ಚು ಉಪಯುಕ್ತವೆನಿಸಿವೆ, ವ್ಯಾಪಾರಗಳು, ಸಮುದಾಯಗಳು ಮತ್ತು ಕುಟುಂಬಗಳಿಗೆ ಅಪಾರ ಪ್ರಯೋಜನಗಳನ್ನು ಒದಗಿಸುತ್ತವೆ. ಎಲ್ಲ ವೃತ್ತಿಪರ ಮತ್ತು ಶೈಕ್ಷಣಿಕ ಹಿನ್ನೆಲೆಯ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸುವಂತೆ ನಾವು ಪ್ರೋತ್ಸಾಹಿಸುತ್ತೇವೆ, ಇಲ್ಲಿ ತಮ್ಮ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ಕಂಡುಕೊಳ್ಳಲು ಮತ್ತು ಅದ್ಭುತ ವೃತ್ತಿಜೀವನ ಹೊಂದಲು ಅವಕಾಶವಿದೆ ಎಂದು ಅವರು ಹೇಳಿದರು.
ಪ್ರತಿ ತಿಂಗಳ 2 ನೇ ಸೋಮವಾರದಂದು ದೇಶದಲ್ಲಿ ಅಪ್ರೆಂಟಿಸ್‌ಶಿಪ್ ಮೇಳಗಳನ್ನು ಆಯೋಜಿಸಲಾಗುತ್ತದೆ, ಇದರಲ್ಲಿ ಹೊಸ ಕೌಶಲ್ಯಗಳನ್ನು ಪಡೆಯಲು ಆಯ್ದ ಅಭ್ಯರ್ಥಿಗಳು ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿ ಮಾಸಿಕ ಸ್ಟೈಫಂಡ್ ಅನ್ನು ಪಡೆಯುತ್ತಾರೆ. ಅಪ್ರೆಂಟಿಸ್‌ಶಿಪ್ ಅನ್ನು ಕೌಶಲ್ಯ ಅಭಿವೃದ್ಧಿಯ ಅತ್ಯಂತ ಸಮರ್ಥನೀಯ ಮಾದರಿ ಎಂದು ಪರಿಗಣಿಸಲಾಗಿದೆ ಮತ್ತು ಇದು ಸ್ಕಿಲ್ ಇಂಡಿಯಾ ಮಿಷನ್ ಅಡಿಯಲ್ಲಿ ಹೆಚ್ಚಿನ ಉತ್ತೇಜನವನ್ನು ಪಡೆಯುತ್ತಿದೆ.
ಅಪ್ರೆಂಟಿಸ್‌ಶಿಪ್ ತರಬೇತಿಯ ಮೂಲಕ ವರ್ಷಕ್ಕೆ 1 ಮಿಲಿಯನ್ ಯುವಕರಿಗೆ ತರಬೇತಿ ನೀಡಲು ಸರ್ಕಾರ ಪ್ರಯತ್ನಿಸುತ್ತಿದೆ ಮತ್ತು ಈ ಉದ್ದೇಶವನ್ನು ಪೂರೈಸಲು, ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ಹೆಚ್ಚಿಸಲು PMNAM ಅನ್ನು ವೇದಿಕೆಯಾಗಿ ಬಳಸಲಾಗುತ್ತಿದೆ. ಇದು ಯುವಜನರಿಗೆ ಈ ಮೇಳದಲ್ಲಿ ಭಾಗವಹಿಸುವ ಕಂಪನಿಗಳಲ್ಲಿ ಇರುವ ವಿವಿಧ ಅವಕಾಶಗಳ ಬಗ್ಗೆ ಅರಿವು ಮೂಡಿಸುತ್ತದೆ. For more info: https://www.msde.gov.in/
*****
(Release ID: 1889187)
Visitor Counter : 211