ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹೊಸದಿಲ್ಲಿಯಲ್ಲಿ ನಡೆದ  ಪ್ರಧಾನ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 06 JAN 2023 5:21PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ನಡೆದ  ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಪಾಲ್ಗೊಂಡರು. ಪ್ರಮುಖ ನೀತಿ ಸಂಬಂಧಿತ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ತಂಡ ಮನೋಭಾವವನ್ನು ಬಲಪಡಿಸಲು ಇದು ಅದ್ಭುತ ವೇದಿಕೆಯಾಗಿದೆ ಎಂದು ಶ್ರೀ ಮೋದಿ ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು ಅದರಲ್ಲಿ, 

“ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಭಾಗವಹಿಸಿದ್ದೇನೆ. ಪ್ರಮುಖ ನೀತಿ ಸಂಬಂಧಿತ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ತಂಡ ಸ್ಫೂರ್ತಿಯನ್ನು ಬಲಪಡಿಸಲು ಇದು ಅದ್ಭುತ ವೇದಿಕೆಯಾಗಿದೆ”  ಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1889293) ವಿಸಿಟರ್ ಕೌಂಟರ್ : 193