ಪ್ರಧಾನ ಮಂತ್ರಿಯವರ ಕಛೇರಿ
‘ನಾಟು ನಾಟು’ ಹಾಡಿಗೆ ಅತ್ಯುತ್ತಮ ಮೂಲ ಗೀತೆ 'ಗೋಲ್ಡನ್ ಗ್ಲೋಬ್ ಪ್ರಶಸ್ತಿ'ಯನ್ನು ಗೆದ್ದ RRR-ಆರ್ ಆರ್ ಆರ್ ಚಿತ್ರ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
11 JAN 2023 12:43PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆರ್ ಆರ್ ಆರ್ ಚಿತ್ರದ 'ನಾಟು ನಾಟು' ಹಾಡಿಗೆ 'ಗೋಲ್ಡನ್ ಗ್ಲೋಬ್ ಪ್ರಶಸ್ತಿ-2023'ರ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿ ಗೆದ್ದಿದ್ದಕ್ಕಾಗಿ ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
“ಒಂದು ವಿಶೇಷ ಸಾಧನೆ! ಎಂ ಎಂ ಕೀರವಾಣಿ, ಪ್ರೇಮ್ ರಕ್ಷಿತ್, ಕಾಲ ಭೈರವ, ಚಂದ್ರಬೋಸ್, ರಾಹುಲ್ ಸಿಪ್ಲಿಗುಂಜ್ ಅವರಿಗೆ ಅಭಿನಂದನೆಗಳು. ಎಸ್ ಎಸ್ ರಾಜಮೌಳಿ, ಜೂನಿಯರ್ ಎನ್‌ಟಿಆರ್, ರಾಮ್ ಚರಣ್ ಮತ್ತು ಆರ್‌ಆರ್‌ಆರ್ ಚಿತ್ರದ ಇಡೀ ತಂಡವನ್ನು ಈ ವಿಶೇಷ ಸಂದರ್ಭದಲ್ಲಿ ನಾನು ಅಭಿನಂದಿಸುತ್ತೇನೆ. ಈ ಪ್ರತಿಷ್ಠಿತ ಗೌರವ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತಂದಿದೆ.'' ಎಂದು ಬರೆದುಕೊಂಡಿದ್ದಾರೆ.
*****
(रिलीज़ आईडी: 1890289)
आगंतुक पटल : 171
इस विज्ञप्ति को इन भाषाओं में पढ़ें:
Gujarati
,
Marathi
,
Manipuri
,
Tamil
,
English
,
Urdu
,
हिन्दी
,
Bengali
,
Assamese
,
Punjabi
,
Odia
,
Telugu
,
Malayalam