ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಇಸ್ರೇಲ್ ಪ್ರಧಾನಮಂತ್ರಿ ಘನತೆವೆತ್ತ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ 

प्रविष्टि तिथि: 11 JAN 2023 6:22PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. 

ಗೌರವಾನ್ವಿತ ನೆತನ್ಯಾಹು ಅವರು ಇಸ್ರೇಲ್‌ನ ಪ್ರಧಾನ ಮಂತ್ರಿಯಾಗಿ ಸತತ ಆರನೇ ಬಾರಿಗೆ ಆಯ್ಕೆಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನ ಮಂತ್ರಿಗಳು, ಯಶಸ್ವಿಯಾಗಿ ಆಡಳಿತ ನಡೆಸಿಕೊಂಡು ಹೋಗುವಂತೆ ಎಂದು ಹಾರೈಸಿದರು. 

ಇತ್ತೀಚಿನ ವರ್ಷಗಳಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಸಹಭಾಗಿತ್ವದಲ್ಲಿ ತ್ವರಿತ ಪ್ರಗತಿ ಸಾಧಿಸುತ್ತಿರುವ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು. ವಿವಿಧ ಕ್ಷೇತ್ರಗಳಲ್ಲಿ ಕಾರ್ಯತಂತ್ರದ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಸಾಮರ್ಥ್ಯದ ಬಗ್ಗೆ ಒಪ್ಪಿಕೊಂಡರು. 

ಘನತವೆತ್ತ ನೆತನ್ಯಾಹು ಅವರು ಆದಷ್ಟು ಶೀಘ್ರ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನ ಮಂತ್ರಿಗಳು ಇದೇ ಸಂದರ್ಭದಲ್ಲಿ ಆಹ್ವಾನ ನೀಡಿದರು.

******


(रिलीज़ आईडी: 1890552) आगंतुक पटल : 167
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam