ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) ಸಂಸ್ಥಾಪನಾ ದಿನ: ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಶಯ
प्रविष्टि तिथि:
19 JAN 2023 11:30AM by PIB Bengaluru
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ.
"ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗೆ ಶುಭಾಶಯಗಳನ್ನು ತಿಳಿಸುತ್ತೇನೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಅತ್ಯಂತ ಸವಾಲಿನ ಸಂದರ್ಭಗಳಲ್ಲಿ ಜನರಿಗೆ ಸಹಾಯ ಮಾಡಲು, ರಕ್ಷಣೆ ಮಾಡಲು ತಮ್ಮ ಎಲ್ಲ ರೀತಿಯ ಪ್ರಯತ್ನಗಳನ್ನು, ಶಕ್ತಿ ಮೀರಿ ಪರಿಶ್ರಮ ಪಡುತ್ತಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಧೈರ್ಯವು ಪ್ರಶಂಸನೀಯ ಮತ್ತು ಶ್ಲಾಘನೀಯ. ವಿಪತ್ತು ನಿರ್ವಹಣೆಯ ಮೂಲ ಸೌಕರ್ಯವನ್ನು ಅಭಿವೃದ್ಧಿ ಪಡಿಸುವುದು ಸೇರಿದಂತೆ ವಿಪತ್ತು ನಿರ್ವಹಣೆಗೆ ಬೇಕಾಗಿರುವ ಎಲ್ಲ ಸಲಕರಣೆ ಮತ್ತು ಉಪಕರಣಗಳ ಶೇಖರಣೆಗೆ ಹಾಗೂ ಅದರ ಸಾಮರ್ಥ್ಯ ಹೆಚ್ಚಳಕ್ಕೆ ಭಾರತ ಅನೇಕ ಪ್ರಯತ್ನಗಳನ್ನು ಮಾಡುತ್ತಿದೆ" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ.
***
(रिलीज़ आईडी: 1892136)
आगंतुक पटल : 199
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam