ಪ್ರಧಾನ ಮಂತ್ರಿಯವರ ಕಛೇರಿ

ಸುಪ್ರೀಂ ಕೋರ್ಟ್ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡುವ ಸಿಜೆಐ ಆಲೋಚನೆಯನ್ನು ಸ್ವಾಗತಿಸಿದ ಪ್ರಧಾನಿ

Posted On: 22 JAN 2023 5:05PM by PIB Bengaluru

ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡುವ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಆಲೋಚನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಈ ಕುರಿತು ಪ್ರಧಾನಿ ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:

 "ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಗೌರವಾನ್ವಿತ ಸಿಜೆಐ ನ್ಯಾ. ಡಿ.ವೈ.ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುವ ಅಗತ್ಯದ ಬಗ್ಗೆ ಮಾತನಾಡಿದರು. ಅದಕ್ಕಾಗಿ ತಂತ್ರಜ್ಞಾನವನ್ನು ಬಳಸುವಂತೆಯೂ ಅವರು ಸಲಹೆ ನೀಡಿದರು. ಇದು ಪ್ರಶಂಸನೀಯ ಚಿಂತನೆಯಾಗಿದ್ದು, ಇದರಿಂದ ಅನೇಕ ಜನರಿಗೆ, ವಿಶೇಷವಾಗಿ ಯುವಕರಿಗೆ ಸಹಾಯವಾಗುತ್ತದೆ.ʼʼ 

"ಭಾರತವು ಹಲವಾರು ಭಾಷೆಗಳನ್ನು ಹೊಂದಿದೆ, ಈ ವೈವಿಧ್ಯತೆಯೇ ನಮ್ಮ ಸಾಂಸ್ಕೃತಿಕ ಚೈತನ್ಯವನ್ನು ಹೆಚ್ಚಿಸಿದೆ. ಮಾತೃಭಾಷೆಯಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯದಂತಹ ವಿಷಯಗಳನ್ನು ಅಧ್ಯಯನ ಮಾಡುವ ಆಯ್ಕೆಯನ್ನು ನೀಡುವುದು ಸೇರಿದಂತೆ ಭಾರತೀಯ ಭಾಷೆಗಳನ್ನು ಉತ್ತೇಜಿಸಲು ಕೇಂದ್ರ ಸರಕಾರ ಹಲವಾರು ಪ್ರಯತ್ನಗಳನ್ನು ಕೈಗೊಳ್ಳುತ್ತಿದೆ.”

*****



(Release ID: 1892876) Visitor Counter : 130